
ಪ್ರಜಾವಾಣಿ ವಾರ್ತೆ
ಮುಳಬಾಗಿಲು: ನಗರದ ಸೋಮೇಶ್ವರ ಪಾಳ್ಯದಲ್ಲಿರುವ ಪ್ರಸನ್ನ ಸೋಮೇಶ್ವರ ದೇವಾಲಯದಲ್ಲಿ ಮೂರನೇ ಕಾರ್ತಿಕ ಸೋಮವಾರದ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.
ಮೂಲ ದೇವರ ಶಿವನ ಲಿಂಗವನ್ನು ಬೆಣ್ಣೆ, ತುಪ್ಪ, ಅರಿಶಿನ ಕುಂಕುಮ ಹಾಗೂ ನಾನಾ ಬಗೆಯ ಹೂಗಳಿಂದ ಅಲಂಕಾರ ಮಾಡಲಾಗಿತ್ತು. ಬೆಳಿಗ್ಗೆ ರುದ್ರಾಭಿಷೇಕ, ಕ್ಷೀರಾಭಿಷೇಕ, ಪಂಚಾಮೃತ, ಮಹಾ ಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆದವು.
ದೇವಾಸ್ಥಾನಕ್ಕೆ ಸುತ್ತಮುತ್ತಲಿನ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಡಿ.11ರಂದು ಕಡೆಯ ಕಾರ್ತಿಕ ಸೋಮವಾರದಂದು ದೇವಾಲಯದಲ್ಲಿ ಲಕ್ಷ ದೀಪೋತ್ಸವ ಹಾಗೂ ಜಾತ್ರಾ ಮಹೋತ್ಸವ ನಡೆಯಲಿದೆ ಎಂದು ಪ್ರಧಾನ ಅರ್ಚಕ ರಾಮನಾಥ ದೀಕ್ಷಿತ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.