ADVERTISEMENT

ಮುಳಬಾಗಿಲು: ಕಂಬದ ಲಕ್ಷ್ಮಿ ನರಸಿಂಹ, ನಲ್ಲಗಂಗಮ್ಮ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2026, 6:29 IST
Last Updated 3 ಮಾರ್ಚ್ 2026, 6:29 IST
ಮುಳಬಾಗಿಲು ತಾಲ್ಲೂಕಿನ ಮಾಣಿಕ್ಯನತ್ತ ಗ್ರಾಮದ ನಲ್ಲಗಂಗಮ್ಮ ದೇವರ ರಥೋತ್ಸವ ಭಾನುವಾರ ಅದ್ದೂರಿಯಾಗಿ ನಡೆಯಿತು
ಮುಳಬಾಗಿಲು ತಾಲ್ಲೂಕಿನ ಮಾಣಿಕ್ಯನತ್ತ ಗ್ರಾಮದ ನಲ್ಲಗಂಗಮ್ಮ ದೇವರ ರಥೋತ್ಸವ ಭಾನುವಾರ ಅದ್ದೂರಿಯಾಗಿ ನಡೆಯಿತು   

ಮುಳಬಾಗಿಲು: ತಾಲ್ಲೂಕಿನ ಕದರೀಪುರದ ಕಂಬದ ಲಕ್ಷ್ಮಿ ನರಸಿಂಹ ಸ್ವಾಮಿ ಹಾಗೂ ಮಾಣಿಕ್ಯನತ್ತ ಗ್ರಾಮದ ನಲ್ಲಗಂಗಮ್ಮ ದೇವಿ ಬ್ರಹ್ಮ ರಥೋತ್ಸವ ಭಾನುವಾರ ನೂರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆದವು.

ಬ್ರಹ್ಮ ರಥೋತ್ಸವ ಅಂಗವಾಗಿ ಮೂಲ ದೇವರನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ದೇವಾಲಯಗಳಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನೆರವೇರಿದವು.

ಎರಡೂ ದೇವಾಲಯಗಳಲ್ಲಿ ಮಧ್ಯಾಹ್ನ ಅಭಿಜಿನ್ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥ ಎಳೆಯುತ್ತಿದ್ದಂತೆ ಭಕ್ತರು ಹೂ, ದವನ, ಬಾಳೆಹಣ್ಣು, ಉಪ್ಪು ಮತ್ತಿತರ ಮಂಗಳಕರ ವಸ್ತುಗಳನ್ನು ಅರ್ಪಿಸಿ ಹರಕೆ ಸಲ್ಲಿಸಿದರು.

ಜಾತ್ರೆಯಲ್ಲಿ ಭಕ್ತರಿಗೆ ಅನ್ನದಾನ ನಡೆಯಿತು. ಶಾಸಕ ಸಮೃದ್ಧಿ ಮಂಜುನಾಥ್, ಆವಣಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಆದಿನಾರಾಯಣ, ರಘುಪತಿ ರೆಡ್ಡಿ, ರಾಮಲಿಂಗ ರೆಡ್ಡಿ, ರಾಜೇಂದ್ರ ಗೌಡ, ಗೊಲ್ಲಹಳ್ಳಿ ಜಗದೀಶ್, ಜಮ್ಮನಹಳ್ಳಿ ಕೃಷ್ಣಪ್ಪ, ಗುಜ್ಜನಹಳ್ಳಿ ಮಂಜುನಾಥ್, ಉಮಾಶಂಕರ್ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.