ADVERTISEMENT

ಮುಳಬಾಗಿಲು | ರಸ್ತೆ ಮೇಲೆ ಹರಿಯುವ ಚರಂಡಿ ನೀರು

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2025, 3:01 IST
Last Updated 7 ಅಕ್ಟೋಬರ್ 2025, 3:01 IST
ಮುಳಬಾಗಿಲು ತಾಲ್ಲೂಕಿನ ಪುಟ್ಟೇನಹಳ್ಳಿಯಲ್ಲಿ ಮಳೆ ಹಾಗೂ ಚರಂಡಿ ನೀರು ರಸ್ತೆಯಲ್ಲಿ ಹರಿಯುತ್ತಿರುವುದು
ಮುಳಬಾಗಿಲು ತಾಲ್ಲೂಕಿನ ಪುಟ್ಟೇನಹಳ್ಳಿಯಲ್ಲಿ ಮಳೆ ಹಾಗೂ ಚರಂಡಿ ನೀರು ರಸ್ತೆಯಲ್ಲಿ ಹರಿಯುತ್ತಿರುವುದು   

ಮುಳಬಾಗಿಲು: ತಾಲ್ಲೂಕಿನ ಪುಟ್ಟೇನಹಳ್ಳಿ ಗ್ರಾಮದಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿದರೆ, ಚರಂಡಿ ನೀರು ಮನೆಗಳ ಮುಂದೆ ನಿಲ್ಲುತ್ತಿದೆ ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಲ್ಲಿ ಗ್ರಾಮಸ್ಥರಿದ್ದಾರೆ.

ತಾಲ್ಲೂಕಿನ ಮಲ್ಲನಾಯಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪುಟ್ಟೇನಹಳ್ಳಿ ಗ್ರಾಮದಲ್ಲಿ ಚರಂಡಿ ವ್ಯವಸ್ಥೆ ಸರಿಯಿಲ್ಲ. ಹಾಗಾಗಿ ಚರಂಡಿ ನೀರು ಬೇರೆಡೆಗೆ ಹರಿಯಲು ಅವಕಾಶ ಇಲ್ಲದೆ ರಸ್ತೆಯಲ್ಲಿ ನಿಲ್ಲುತ್ತಿದೆ. ಇದರಿಂದ ಜನ ಚರಂಡಿ ನೀರಿನಲ್ಲಿ ಓಡಾಡುವಂತಾಗಿದೆ. ಜೊತೆಗೆ ಸೊಳ್ಳೆ ಕಾಟ ಹೆಚ್ಚಾಗಿದೆ. ಮಳೆಗಾಲದಲ್ಲಂತೂ ಮಳೆ ನೀರು ರಸ್ತೆಯಲ್ಲಿ ಕುಂಟೆಯಂತೆ ನಿಂತು ಮನೆಗಳಿಗೆ ನುಗ್ಗುತ್ತದೆ. ಈ ಬಗ್ಗೆ ಮೂರು ವರ್ಷದಿಂದ ಸ್ಥಳೀಯ ಆಡಳಿತದ ಅಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ ಎಂಬುದು ಗ್ರಾಮಸ್ಥರ ದೂರಾಗಿದೆ.

ಈ ಸಂಬಂಧ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ವರದರಾಜು ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದರೆ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.