ADVERTISEMENT

ಮುಳಬಾಗಿಲು ತಾಲ್ಲೂಕು ಸಾಹಿತ್ಯ ಸಮ್ಮೇಳನ

​ಪ್ರಜಾವಾಣಿ ವಾರ್ತೆ
Published 8 ಜನವರಿ 2021, 7:10 IST
Last Updated 8 ಜನವರಿ 2021, 7:10 IST
ಮುಳಬಾಗಿಲು ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ 7ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಯಿತು
ಮುಳಬಾಗಿಲು ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ 7ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಯಿತು   

ಮುಳಬಾಗಿಲು: ‘ಗಡಿ ಪ್ರದೇಶದಲ್ಲಿ ನಡೆಯುವ ಕನ್ನಡಪರ ಚಟುವಟಿಕೆಗಳಲ್ಲಿ ಜನರು ಭಾಗವಹಿಸಿ ಯಶಸ್ವಿಗೊಳಿಸಬೇಕು’ ಎಂದು ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಹರಪನಾಯಕನಗೊಲ್ಲಹಳ್ಳಿ ವೆಂಕಟರವಣಪ್ಪ ನುಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ನಗರದ ಡಿವಿಜಿ ಕನ್ನಡ ಗಡಿ ಭವನದಲ್ಲಿ ಜ. 9ರಂದು ನಡೆಯುವ 7ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.

ಗಡಿ ತಾಲ್ಲೂಕಿನಲ್ಲಿ ತೆಲುಗು ಭಾಷೆಯ ಪ್ರಭಾವದ ನಡುವೆಯೂ ಕನ್ನಡಿಗರು ಕನ್ನಡತನವನ್ನು ಬಿಟ್ಟಿಲ್ಲ. ಮುಂದಿನ ದಿನಗಳಲ್ಲಿ ಕನ್ನಡದಲ್ಲಿಯೇ ಮಾತನಾಡಿ ಕನ್ನಡ ಭಾಷೆಯ ಸಾರ್ವಭೌಮತ್ವವನ್ನು ಸಾರಬೇಕು ಎಂದು ಹೇಳಿದರು.

ADVERTISEMENT

ಸಮ್ಮೇಳನಾಧ್ಯಕ್ಷ ಚಾಂದ್‌ ಪಾಷಾ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಕೆಂಬೋಡಿ ನಾಗರಾಜ್, ಅಧ್ಯಕ್ಷ ಜಯರಾಮರೆಡ್ಡಿ, ಗೌರವ ಕಾರ್ಯದರ್ಶಿ ವಿ. ಜಯಪ್ಪ, ಯಾನಾದಹಳ್ಳಿ ನಾರಾಯಣಸ್ವಾಮಿ, ದಾದೂಸಾಬಿ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟಗಿರಿಯಪ್ಪ, ಮಂಡಿಕಲ್ ಲಕ್ಷ್ಮಿನಾರಾಯಣ, ಸರೋಜಮ್ಮ ನಾರಾಯಣಾಚಾರಿ, ಈಶ್ವರಮ್ಮ, ರಾಜೇಶ್ವರಿ ಶಾರದಮ್ಮ, ಕುರುಡುಮಲೆ ಚಲಪತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.