ADVERTISEMENT

ಮುಳಬಾಗಿಲು | ಕ್ಯಾನ್ಸರ್‌: ಮದ್ಯಸೇವಿಸಿ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 24 ಜನವರಿ 2026, 8:14 IST
Last Updated 24 ಜನವರಿ 2026, 8:14 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಮುಳಬಾಗಿಲು: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮಹಿಳೆ ಮನನೊಂದು ಮದ್ಯ ಸೇವಿಸಿ ಮೃತಪಟ್ಟಿರುವ ಘಟನೆ ಗುರುವಾರ ನಗರದ ಹಳೆ ಜೈನ್ ಸ್ಕೂಲ್ ಕಾಂಪೌಂಡಿನಲ್ಲಿ ನಡೆದಿದೆ.

ADVERTISEMENT

ಮುಳಬಾಗಿಲು ತಾಲ್ಲೂಕಿನ ಚಿಕ್ಕನಹಳ್ಳಿಯ ಶಕುಂತಲ (40) ಮೃತರು ಎಂದು ಗುರುತಿಸಲಾಗಿದೆ. ಮೃತರಿಗೆ ಇಬ್ಬರು ಮಕ್ಕಳಿದ್ದಾರೆ.

ಗುರುವಾರ ಕುಟುಂಬದವರೊಂದಿಗೆ ಜಗಳ ಮಾಡಿಕೊಂಡು ಬಂದು ನಗರದ ಬಾರ್‌ವೊಂದರಲ್ಲಿ ಕುಡಿದು ಜೈನ್ ಶಾಲಾ ಆವರಣದಲ್ಲಿ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.  ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.