ಮುಳಬಾಗಿಲು: ಪುರಾಣ ಪ್ರಸಿದ್ಧ ಆಂಜನೇಯಸ್ವಾಮಿ ಬ್ರಹ್ಮರಥೋತ್ಸವ ಶನಿವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು.
ರಥೋತ್ಸವ ಪ್ರಯುಕ್ತ ಒಂದು ವಾರದಿಂದ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ದೇವರ ಮೂಲ ವಿಗ್ರಹವನ್ನು ಅತ್ಯಾಕರ್ಷಕವಾಗಿ ಅಲಂಕಾರ ಮಾಡಿ, ಇಡೀ ದೇವಾಲಯವನ್ನು ಹೂಗಳಿಂದ ಸಿಂಗರಿಸಲಾಗಿತ್ತು. ಮುಖ್ಯ ದ್ವಾರವನ್ನು ವಿಶೇಷವಾದ ಹೂಗಳು ಹಾಗೂ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿತ್ತು.
ಮೂಲ ದೇವರ ವಿಗ್ರಹಕ್ಕೆ ಕಳಶಾರಾಧನೆ, ಧ್ವಜಾರೋಹಣ, ಮಹಾ ಮಂಗಳಾರತಿ, ಗರುಡ ಸೇವೆ, ಕಲ್ಯಾಣೋತ್ಸವ, ಪಂಚಾಮೃತ, ತೀರ್ಥ ಪ್ರಸಾದ ವಿನಿಯೋಗ ಮತ್ತಿತರ ಪೂಜಾ ಕಾರ್ಯಕ್ರಮಗಳು ನಡೆದವು.
ಬೆಳಗ್ಗೆ ತಹಶೀಲ್ದಾರ್ ವಿ. ಗೀತಾ, ಶಾಸಕ ಸಮೃದ್ಧಿ ಮಂಜುನಾಥ್ ರಥೋತ್ಸವಕ್ಕೆ ಪೂಜಾ ಕಾರ್ಯಕ್ರಮಗಳಲ್ಲಿ ಹಾಗೂ ದೇವರ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮುಜರಾಯಿ ಇಲಾಖೆ ಸುಬ್ರಮಣಿ, ಸುಹಾಸ್ ಶೆಟ್ಟಿ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.