ADVERTISEMENT

ಮುಳಬಾಗಿಲು | ಸೋತರೂ ಕ್ಷೇತ್ರದ ಜನರ ಜತೆಗಿರುವೆ: ವಿ.ಆದಿನಾರಾಯಣ

​ಪ್ರಜಾವಾಣಿ ವಾರ್ತೆ
Published 13 ಮೇ 2023, 15:57 IST
Last Updated 13 ಮೇ 2023, 15:57 IST
ಕಾಂಗ್ರೆಸ್ ಅಭ್ಯರ್ಥಿ ವಿ.ಆದಿನಾರಾಯಣ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು
ಕಾಂಗ್ರೆಸ್ ಅಭ್ಯರ್ಥಿ ವಿ.ಆದಿನಾರಾಯಣ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು   

ಮುಳಬಾಗಿಲು: ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತರೂ ಎಂದಿಗೂ ಕ್ಷೇತ್ರದ ಜನರ ಜೊತೆಯಲ್ಲಿದ್ದು ಸೇವೆ ಮಾಡುತ್ತೇನೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ವಿ.ಆದಿನಾರಾಯಣ ತಿಳಿಸಿದರು.

ತಾಲ್ಲೂಕಿನ ವುಡೀಸ್ ಹೋಟೆಲ್ ಆವರಣದಲ್ಲಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿ, ‘ನಾನು ಕೆಲವೇ ದಿನಗಳಲ್ಲಿ ಚುನಾವಣಾ ಪ್ರಚಾರಕ್ಕೆ ಬಂದು ತಾಲ್ಲೂಕಿನ ತುಂಬೆಲ್ಲಾ ಓಡಾಡಿ ಮತಯಾಚನೆ ಮಾಡಲಾಗಿತ್ತು. ಆದರೂ ನಾನು ಸೋಲನ್ನು ಅನುಭವಿಸಿದೆ. ಹೀಗಾಗಿ ಎರಡು ಮೂರು ದಿನಗಳಲ್ಲಿ ಪಕ್ಷದ ಕಾರ್ಯಕರ್ತರ ಹಾಗೂ ಮುಖಂಡರ ಸಭೆ ಕರೆದು ಮುಂದೆ ತಾಲ್ಲೂಕಿನಲ್ಲಿ ಯಾವ ರೀತಿ ಪಕ್ಷದ ಸಂಘಟನೆ ಮಾಡಬೇಕು ಹಾಗೂ ಕಾಂಗ್ರೆಸ್ ಸರ್ಕಾರದ ಪ್ರಣಾಳಿಕೆಗಳನ್ನು ತಲುಪಿಸಲು ಹೇಗೆ ಯೋಜನೆಗಳನ್ನು ಹಮ್ಮಿಕೊಳ್ಳಬೇಕು ಎಂದು ತೀರ್ಮಾನಿಸಲಾಗುವುದು’ ಎಂದು ಹೇಳಿದರು.

ಆವಣಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಸಿ.ನೀಲಕಂಠೇ ಗೌಡ, ಟೌನ್ ಬ್ಲಾಕ್ ಅಧ್ಯಕ್ಷ ಅಮಾನುಲ್ಲಾ, ರಾಜೇಂದ್ರ ಗೌಡ, ಸಿದ್ದನಹಳ್ಳಿ ಶೇಖರ್, ಉತ್ತನೂರು ಅರವಿಂದ್, ವಜಾತ್ ಉಲ್ಲಾ ಖಾನ್, ಕಗ್ಗನಹಳ್ಳಿ ಶ್ರೀನಿವಾಸ್, ಹೆಬ್ಬಣಿ ವೇಣು, ಉದಯ್ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.