ADVERTISEMENT

ಮುಳಬಾಗಿಲು: ಕರ್ತವ್ಯ ನಿರತ ಹೆಡ್‌ ಕಾನ್‌ಸ್ಟೆಬಲ್ ಸುಬ್ರಮಣಿ ಹೃದಯಾಘಾತದಿಂದ ಸಾವು

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2025, 4:56 IST
Last Updated 16 ಡಿಸೆಂಬರ್ 2025, 4:56 IST
<div class="paragraphs"><p>ಸುಬ್ರಮಣಿ</p></div>

ಸುಬ್ರಮಣಿ

   

ಮುಳಬಾಗಿಲು: ಕರ್ತವ್ಯದಲ್ಲಿದ್ದಾಗಲೇ ಹೆಡ್‌ ಕಾನ್‌ಸ್ಟೆಬಲ್‌ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.

ಮುಳಬಾಗಿಲು ನಗರದ ಮುತ್ಯಾಲಪೇಟೆ ಬಡಾವಣೆಯ ಸುಬ್ರಮಣಿ (49) ಮೃತರು.

ADVERTISEMENT

ಸುಬ್ರಮಣಿ ತಾಲ್ಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸೋಮವಾರ ಸಂಚಾರಿ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಕೂಡಲೇ ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಮೃತರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ಮೃತರ ಅಂತ್ಯಕ್ರಿಯೆ ಮುಳಬಾಗಿಲು ನಗರದಲ್ಲಿ ನೆರವೇರಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.