
ಮುಳಬಾಗಿಲು: ತಾಲ್ಲೂಕಿನಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸೋಮವಾರ ಹೆದ್ದಾರಿ ನಿರ್ವಹಣಾ ಅಧಿಕಾರಿಗಳು ಎಲ್ಲೆಂದರಲ್ಲಿ ವಾಹನ ನಿಲುಗಡೆ ಹಾಗೂ ತ್ಯಾಜ್ಯ ವಿಲೇವಾರಿ ಮಾಡಿದರು.
ರಾಷ್ಟ್ರೀಯ ಹೆದ್ದಾರಿ ಮೂಲ ಸೌಲಭ್ಯಗಳಿಲ್ಲದೆ ಇತ್ತು. ಈ ಬಗ್ಗೆ ಪ್ರಜಾವಾಣಿಯಲ್ಲಿ ನ.24ರಂದು ‘ಅವ್ಯವಸ್ಥೆಗಳ ಆಗರ ರಾಷ್ಟ್ರೀಯ ಹೆದ್ದಾರಿ 75, ಹೆಸರಿಗಷ್ಟೇ ಹೆದ್ದಾರಿ ಮೂಲ ಸೌಲಭ್ಯಗಳು ಇಲ್ಲದೆ ವಾಹನ ಸವಾರರಿಗೆ ತೊಂದರೆ’ ಎಂಬ ಶೀರ್ಷಿಕೆ ಅಡಿಯಲ್ಲಿ ಸುದ್ದಿ ಪ್ರಕಟವಾಗಿತ್ತು. ಇದಕ್ಕೆ ಸ್ಪಂದಿಸಿದ ಹೆದ್ದಾರಿ ನಿರ್ವಹಣಾ ಸಿಬ್ಬಂದಿ ವಾಹನಗಳ ನಿಲುಗಡೆ ಹಾಗೂ ತ್ಯಾಜ್ಯ ಸಮಸ್ಯೆಯನ್ನು ಪರಿಹರಿಸಿದ್ದಾರೆ.
ನಂಗಲಿ ಬಳಿಯ ತರಕಾರಿ ಮಾರುಕಟ್ಟೆ ಮುಂಭಾಗದಲ್ಲಿ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಹಾಗೂ ತರಕಾರಿ ಸಾಗಾಣೆ ವಾಹನಗಳು ಎಲ್ಲೆಂದರಲ್ಲಿ ನಿಂತಿದ್ದವು. ಅವುಗಳನ್ನು ತೆರವುಗೊಳಿಸಿದ್ದಾರೆ. ಹೆದ್ದಾರಿಯಲ್ಲಿ ಸುರಿದಿದ್ದ ಕಸದ ರಾಶಿಯನ್ನು ಬೃಹತ್ ಯಂತ್ರಗಳ ಮೂಲಕ ತೆರವುಗೊಳಿಸಿದರು. ಮುಂದಿನ ದಿನಗಳಲ್ಲಿ ಎಲ್ಲಾ ಸಮಸ್ಯೆಗಳನ್ನು ಹಂತ ಹಂತವಾಗಿ ನಿವಾರಿಸುವುದಾಗಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.