
ಮುಳಬಾಗಿಲು: ತಾಲ್ಲೂಕಿನ ನಂಗಲಿ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ರಾಮಚಂದ್ರಪ್ಪ ಶುಕ್ರವಾರ ಭೇಟಿ ನೀಡಿ ಶಿಕ್ಷಕರಿಗೆ ನೋಟಿಸ್ ನೀಡಿದ್ದಾರೆ.
ಶಾಲೆಯಲ್ಲಿ ಮುಖ್ಯಶಿಕ್ಷಕ ಬಾಬಾಜಾನ್ ವಿದ್ಯಾರ್ಥಿಗಳ ಕೈಯಲ್ಲಿ ಮಂಗಳವಾರ ಶೌಚಾಲಯ ಸ್ವಚ್ಛಗೊಳಿಸಿದ್ದರು. ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ರಾಮಚಂದ್ರಪ್ಪ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿ, ಶಿಕ್ಷಕರಿಗೆ ನೋಟಿಸ್ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಶಾಲೆಗೆ ಭೇಟಿ ನೀಡಿ ಪೋಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಭೆ ನಡೆಸಲಾಗಿದೆ. ಇನ್ನೊಮ್ಮೆ ಈ ರೀತಿಯ ಘಟನೆ ಮರುಕಳಿಸದಂತೆ ನೋಟಿಸ್ ನೀಡಲಾಗಿದೆ ಎಂದು ಹೇಳಿದರು.
ಶಾಲಾ ವಿದ್ಯಾರ್ಥಿಗಳ ಕೈಗಳಲ್ಲಿ ಶೌಚಾಲಯ ಸ್ವಚ್ಛಗೊಳಿಸಿರುವ ಮುಖ್ಯ ಶಿಕ್ಷಕರ ಕ್ರಮ ಸಹಿಸಲಾಗದು. ಹಾಗಾಗಿ ಆ ಶಿಕ್ಷಕರನ್ನು ಅಮಾನತು ಮಾಡಲು ಶಿಫಾರಸು ಮಾಡಲಾಗುವುದು.ಸಮೃದ್ಧಿ ಮಂಜುನಾಥ್, ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.