ವೇಮಗಲ್: ಹೋಬಳಿಯ ಕ್ಯಾಲನೂರು ಕರ್ನಾಟಕ ಪಬ್ಲಿಕ್ ಶಾಲೆಗೆ ಗುರುವಾರ ಶಿಕ್ಷಣ ಇಲಾಖೆಯ ಎಸ್ಎಸ್ಎಲ್‌ಸಿ ಪರೀಕ್ಷೆಯ ನೋಡಲ್ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ನೋಡಲ್ ಅಧಿಕಾರಿ ಅಶೋಕ್, ‘ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಮಾನವೀಯ ಮೌಲ್ಯಗಳನ್ನು ಕಲಿಸಿಕೊಡಬೇಕು. ಇದು ಮಕ್ಕಳು ಉತ್ತಮ ಫಲಿತಾಂಶ ಪಡೆಯಲು ಸಹಕಾರಿಯಾಗಲಿದೆ. ಜೊತೆಗೆ ಮಕ್ಕಳ ಬದುಕಿಗೆ ಭವಿಷ್ಯದಲ್ಲಿ ದಾರಿದೀಪವಾಗಲಿದೆ’ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಒ. ಮಲ್ಲಿಕಾರ್ಜುನ್ ಹಾಗೂ ಇತರ ಶಿಕ್ಷಕರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.