ADVERTISEMENT

ಕೋಲಾರ: ನರಸಿಂಹಸ್ವಾಮಿ ಲಕ್ಷದೀಪೋತ್ಸವ ಅ. 25ರಂದು

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2025, 6:04 IST
Last Updated 24 ಅಕ್ಟೋಬರ್ 2025, 6:04 IST
<div class="paragraphs"><p>ಪ್ರಾತಿನಧಿಕ ಚಿತ್ರ</p></div>

ಪ್ರಾತಿನಧಿಕ ಚಿತ್ರ

   

ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗವಿರುವ ಶ್ರೀಲಕ್ಷ್ಮಿನರಸಿಂಹಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ಅ.25ರ ಶನಿವಾರ ಲಕ್ಷದೀಪೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ ಪಂಚಾಮೃತ ಅಭಿಷೇಕ, ವಿಶೇಷ ಹೂವಿನ ಅಲಂಕಾರ ಹಾಗೂ ಪೂಜೆ ನಡೆಯಲಿದೆ. ರಾತ್ರಿ ಲಕ್ಷ ದೀಪೋತ್ಸವ ಹಾಗೂ ಬಾಣಬಿರುಸುಗಳ ಪ್ರದರ್ಶನ, ಸ್ವಾಮಿಯ ಭವ್ಯ ಮೆರವಣಿಗೆ ನಗರದಲ್ಲಿ ಸಾಗಿ ಬರಲಿದೆ.

ADVERTISEMENT

‌ಡೊಳ್ಳು ಕುಣಿತ, ವೀರಗಾಸೆ, ಗಾರುಡಿ ಗೊಂಬೆಗಳು, ಪೂಜೆ ತಮಟೆ, ಅಣ್ಣಮ್ಮನ ತಮಟೆ ಕಲಾ ತಂಡದವರು ಪಾಲ್ಗೊಂಡು ಮೆರವಣಿಗೆಗೆ ಮೆರುಗು ನೀಡಲಿದ್ದಾರೆ.

ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ್ ಅಶೋಕ್, ಕಾರ್ಯಕ್ರಮದಲ್ಲಿ ಎಲ್ಲರು ಭಾಗವಹಿಸಬೇಕೆಂದು ಮನವಿ ಮಾಡಿದ್ದಾರೆ.

ಕೋಮುಲ್ ನಿರ್ದೇಶಕ ಕೆ.ಕೆ.ಮಂಜುನಾಥ್, ಕೋಚಿಮುಲ್ ಮಾಜಿ ಅಧ್ಯಕ್ಷ ಬ್ಯಾಟಪ್ಪ, ಜಿ.ಪಂ.ಮಾಜಿ ಸದಸ್ಯ ಮ್ಯಾಕಲ ನಾರಾಯಣಸ್ವಾಮಿ, ಶ್ರೀಲಕ್ಷ್ಮೀನರಸಿಂಹಸ್ವಾಮಿ ಲಕ್ಷ ದೀಪೋತ್ಸವ ಸಮಿತಿ ಪದಾಧಿಕಾರಿಗಳಾದ ಬಾರ್‌ ಕೃಷ್ಣೇಗೌಡ, ಸತ್ಯನಾರಾಯಣ, ಥಿಯೇಟರ್ ಲಕ್ಷ್ಮಣರೆಡ್ಡಿ, ಪುರಸಭೆ ಸದಸ್ಯರಾದ ಎನ್‍ಎನ್‍ಆರ್ ನಾಗರಾಜ್, ನಾಮಿನಿ ಸದಸ್ಯರಾದ ಶಿವರಾಜ್, ಹೇಮಂತ್‍ಕುಮಾರ್, ನರಸಿಂಹಮೂರ್ತಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.