ADVERTISEMENT

ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2022, 2:50 IST
Last Updated 25 ಮಾರ್ಚ್ 2022, 2:50 IST
ಶ್ರೀನಿವಾಸಪುರದ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕೇಂದ್ರದಲ್ಲಿ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಕಾರ್ಯಾಗಾರದಲ್ಲಿ ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಕೆ.ಸಿ. ವಸಂತ ಮಾತನಾಡಿದರು. ಡಯಟ್ ಹಿರಿಯ ಉಪನ್ಯಾಸಕರಾದ ಗಂಗಪ್ಪ, ಪುರುಷೋತ್ತಮ್ ಇದ್ದರು

ಶ್ರೀನಿವಾಸಪುರ: ‘ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುವ ಮುನ್ನ ಅದರ ಸಾಧಕ– ಬಾಧಕ ಕುರಿತು ಜನಾಭಿಪ್ರಾಯ ಸಂಗ್ರಹಿಸುತ್ತಿದೆ. ಪ್ರತಿ ತಾಲ್ಲೂಕು ಹಂತದಲ್ಲಿ ಸಮಾಜದ ಬೇರೆ ಬೇರೆ ಕ್ಷೇತ್ರದ ಜನರ ಸಲಹೆ, ಸೂಚನೆ ಪಡೆಯುತ್ತಿದೆ’ ಎಂದು ತಾಲ್ಲೂಕು ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕೇಂದ್ರದ ಶಿಕ್ಷಣ ಸಮನ್ವಯಾಧಿಕಾರಿ ಕೆ.ಸಿ. ವಸಂತ ಹೇಳಿದರು.

ಪಟ್ಟಣದ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಕೇಂದ್ರದಲ್ಲಿ ಗುರುವಾರ ಏರ್ಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಡಯಟ್‌ನ ಹಿರಿಯ ಉಪನ್ಯಾಸಕ ಗಂಗಪ್ಪ ಮಾತನಾಡಿ, ರಾಷ್ಟ್ರದ ಹಿತದೃಷ್ಟಿಯಿಂದ ಹಾಗೂ ಮಕ್ಕಳ ಮನಸ್ಸನ್ನು ಅರಳಿಸುವ ಉದ್ದೇಶದಿಂದ ಉತ್ತಮ ಪಠ್ಯ ತಯಾರಿಸಬೇಕಾಗಿದೆ ಎಂದರು.

ADVERTISEMENT

ಡಯಟ್‌ನ ಹಿರಿಯ ಉಪನ್ಯಾಸಕ ಪುರುಷೋತ್ತಮ್, ಬಿಆರ್‌ಸಿಗಳಾದ ಹುಮೇಗೌಡ, ನಾಗರಾಜ್, ಶೇಷಾದ್ರಿ, ನಾರಾಯಣಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.