ಮುಳಬಾಗಿಲು: ಮಾರ್ಚ್ 9ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ ಕುರಿತು ನ್ಯಾಯಾಲಯ ಸಂಕೀರ್ಣದಲ್ಲಿ ಶನಿವಾರ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಹಿರಿಯ ನ್ಯಾಯಾಧೀಶ ಈಶ್ವರ್ ಮಾತನಾಡಿ, ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಲು ಇಚ್ಛಿಸುವವರು ಅದಾಲತ್‌ಗೂ ಮುಂಚಿತವಾಗಿ ಸಂಬಂಧಿಸಿದ ಜಿಲ್ಲಾ ಕಾನೂನು ಸೇವಾ ಹಾಗೂ ತಾಲ್ಲೂಕು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ಎಂ.ನರಸಿಂಹಮೂರ್ತಿ ಮಾತನಾಡಿ, ಅದಾಲತ್‌ನಲ್ಲಿ ಅರ್ಜಿ ನೀಡಿದರೆ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದರು.
ಇನ್ನು ಇದೇ ಸಂದರ್ಭದಲ್ಲಿ ಮುಳಬಾಗಿಲು ಗ್ರಾಮಾಂತರ ಹಾಗೂ ನಂಗಲಿ ಪೊಲೀಸ್ ಠಾಣೆಗಳಿಂದ ಸಭೆಗೆ ಗೈರು ಹಾಜರಾಗಿದ್ದ ಪೊಲೀಸ್ ಅಧಿಕಾರಿಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಸ್ನೇಹ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.