ADVERTISEMENT

ಶ್ರೀನಿವಾಸಪುರ: ಜುಲೈ 11ಕ್ಕೆ ನಿಖಿಲ್‌ ಭೇಟಿ, ಸದಸ್ಯತ್ವ ಅಭಿಯಾನ

​ಪ್ರಜಾವಾಣಿ ವಾರ್ತೆ
Published 8 ಜುಲೈ 2025, 6:40 IST
Last Updated 8 ಜುಲೈ 2025, 6:40 IST
ಶ್ರೀನಿವಾಸಪುರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಮಾತನಾಡಿದರು
ಶ್ರೀನಿವಾಸಪುರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಮಾತನಾಡಿದರು    

ಶ್ರೀನಿವಾಸಪುರ: ಜೆಡಿಎಸ್‌ ಸದಸ್ಯತ್ವ ನೋಂದಣಿ ಅಭಿಯಾನ ಅಂಗವಾಗಿ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ, ಜುಲೈ 11 ರಂದು ಮಧ್ಯಾಹ್ನ 2.30ಕ್ಕೆ ಪಟ್ಟಣಕ್ಕೆ ಬರಲಿದ್ದು, ಸ್ವಾಗತಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ತಿಳಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕಾರ್ಯಕ್ರಮಗಳ ರೂಪುರೇಷೆಗಳ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಚಿಂತಾಮಣಿ ವೃತ್ತ ಬಳಿ ಭವ್ಯ ಸ್ವಾಗತ ನೀಡಲಾಗುವುದು. ಅಲ್ಲಿಂದ ಬೈಕ್‌ ರಾಲಿ ಮೂಲಕ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಪುಂಗನೂರು ಕ್ರಾಸ್‌ನಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ’ ಎಂದರು.

‘ಸಭೆಗೆ ಸಂಸದ ಮಲ್ಲೇಶ್‍ ಬಾಬು ಸೇರಿದಂತೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಮುಖಂಡರು, ರಾಜ್ಯ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಪಕ್ಷ ಸಂಘಟನೆ ಇದರ ಉದ್ದೇಶ’ ಎಂದು ಹೇಳಿದರು.

ADVERTISEMENT

ಜಿ.ಪಂ.ಮಾಜಿ ಅಧ್ಯಕ್ಷ ತೂಪಲ್ಲಿ ಆರ್.ನಾರಾಯಣಸ್ವಾಮಿ, ತಾ.ಪಂ.ಮಾಜಿ ಸದಸ್ಯ ಗೊಟ್ಟಿಕುಂಟೆ ಕೃಷ್ಣಾರೆಡ್ಡಿ, ಜೆ.ತಿಮ್ಮಸಂದ್ರ ಗ್ರಾ.ಪಂ.ಅಧ್ಯಕ್ಷ ಶಂಕರರೆಡ್ಡಿ, ಅತ್ತಿಕುಂಟೆ ಹರೀಶ್‍ಕುಮಾರ್, ಯಲ್ದೂರು ಮಣಿ, ನೆಲವಂಕಿ ಸುಬ್ರಮಣಿ, ಉಪ್ಪಕುಂಟೆ ಚಂಗಪ್ಪ, ವೆಂಕಟೇಶ್, ತೂಪಲ್ಲಿ ಮಧುಸೂದನರೆಡ್ಡಿ, ದುರ್ಗಾಪ್ರಸಾದ್, ಸಿ.ಮಣಿ, ಬದರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.