ADVERTISEMENT

ಪೌಲ್ಟ್ರಿ ಫಾರಂಗೆ ನೋಟಿಸ್ ಜಾರಿ

​ಪ್ರಜಾವಾಣಿ ವಾರ್ತೆ
Published 1 ಜುಲೈ 2021, 5:04 IST
Last Updated 1 ಜುಲೈ 2021, 5:04 IST
ಬಂಗಾರಪೇಟೆ ತಾಲ್ಲೂಕಿನ ಲಕ್ಷ್ಮೀವೆಂಕಟೇಶ್ವರ ಪೌಲ್ಟ್ರಿ ಫಾರಂನಲ್ಲಿ ಸ್ವಚ್ಛತೆ ನಿರ್ವಹಿಸಬೇಕು ಎಂದು ಸೂಚಿಸಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ವೆಂಕಟೇಶ್ ಅವರು ಪೌಲ್ಟ್ರಿ ಫಾರಂ ಮಾಲೀಕರಿಗೆ ನೋಟಿಸ್ ನೀಡಿದರು
ಬಂಗಾರಪೇಟೆ ತಾಲ್ಲೂಕಿನ ಲಕ್ಷ್ಮೀವೆಂಕಟೇಶ್ವರ ಪೌಲ್ಟ್ರಿ ಫಾರಂನಲ್ಲಿ ಸ್ವಚ್ಛತೆ ನಿರ್ವಹಿಸಬೇಕು ಎಂದು ಸೂಚಿಸಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ವೆಂಕಟೇಶ್ ಅವರು ಪೌಲ್ಟ್ರಿ ಫಾರಂ ಮಾಲೀಕರಿಗೆ ನೋಟಿಸ್ ನೀಡಿದರು   

ಬಂಗಾರಪೇಟೆ: ಪೌಲ್ಟ್ರಿ ಫಾರಂನಲ್ಲಿ ಸ್ವಚ್ಛತೆ ನಿರ್ವಹಿಸಬೇಕು ಎಂದು ಸೂಚಿಸಿ ಮಾವಳ್ಳಿ ಗ್ರಾಮ ಪಂಚಾಯಿತಿಯ ಐತಾಂಡಹಳ್ಳಿ ಬಳಿ ಇರುವ ಲಕ್ಷ್ಮೀವೆಂಕಟೇಶ್ವರ ಪೌಲ್ಟ್ರಿ ಫಾರಂ ಮಾಲೀಕರಿಗೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ವೆಂಕಟೇಶ್ ಅವರು ನೋಟಿಸ್ ಜಾರಿ ಮಾಡಿದರು.

ಪೌಲ್ಟ್ರಿ ಫಾರಂನಿಂದಾಗಿ ಗ್ರಾಮಗಳಲ್ಲಿ ನೊಣಗಳ ಸಂಖ್ಯೆ ಹೆಚ್ಚಿದ್ದು, ಸಾಂಕ್ರಾಮಿಕ ರೋಗ ಹರಡುವ ಬೀತಿ ಹೆಚ್ಚಿದೆ ಎಂದು ಗ್ರಾಮಸ್ಥರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪೌಲ್ಟ್ರಿ ಫಾರಂನಲ್ಲಿ ಸ್ವಚ್ಛತೆ ಇಲ್ಲದಿರುವುದು, ಕೋಳಿ ಫಾರಂ ಪರವಾನಗಿ ನವೀಕರಣ ಮಾಡದಿರುವುದಿರುವುದು ಗಮನಕ್ಕೆ ಬಂದಿದೆ. ಆದರೆ, ಕೋಳಿ ಫಾರಂ ಕೃಷಿ ಚಟುವಟಿಕೆಯಡಿ ಬರುವ ಕಾರಣ ಅದನ್ನು ಬಂದ್ ಮಾಡಲು ಸಾಧ್ಯವಿಲ್ಲ. ಮೂರು ದಿನದಲ್ಲಿ ಔಷಧಿ ಸಿಂಪಡಿಸಿ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಎಚ್ಚರಿಸಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ADVERTISEMENT

ಕಾರಹಳ್ಳಿ ಗ್ರಾ.ಪಂ. ಸದಸ್ಯ ಬ್ಯಾಟಪ್ಪ ಮಾತನಾಡಿ, ಕಾವರನಹಳ್ಳಿ, ಕಲ್ಕೆರೆ, ನೇರ್ನಹಳ್ಳಿ, ಐತಾಂಡಹಳ್ಳಿ ಗ್ರಾಮಗಳ ಮಧ್ಯದಲ್ಲಿ ಇರುವ ಈ ಕೋಳಿ ಫಾರಂನಿಂದ ನಾಲ್ಕೂ ಗ್ರಾಮಗಳಿಗೆ ತೊಂದರೆಯಾಗಿದೆ ಎಂದರು.

‘ನೋಣಗಳ ಕಾಟ ತಡೆಯಲಾಗುತ್ತಿಲ್ಲ. ಊಟ, ನೀರು, ಹಾಲಿನ ಮೇಲೆ, ಎಳೆ ಮಕ್ಕಳ ಮೇಲೆ, ಎಲ್ಲೆಂದರಲ್ಲಿ ದಾಳಿ ಮಾಡುತ್ತಿವೆ. ಸತತವಾಗಿ ಮೂರು ವರ್ಷದಿಂದ ಸಮಸ್ಯೆ ಮುಂದುವರಿದಿದೆ. ‘ಕೋಳಿ ಫಾರಂಗೆ ಯಾವುದೇ ಪರವಾನಗಿ ಇಲ್ಲ. ಈ ಬಗ್ಗೆ ಅಧಿಕಾರಿಗಳು ನಮಗೆ ಸರಿಯಾಗಿ ಸ್ಪಂದಿಸಿಲ್ಲ’ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.