ADVERTISEMENT

ಕೋಲಾರ ಜಿಲ್ಲೆಯಲ್ಲಿ ಶತಕದ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2020, 13:29 IST
Last Updated 4 ಅಕ್ಟೋಬರ್ 2020, 13:29 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಪ್ರಮಾಣ ದಿಢೀರ್‌ ಏರಿಕೆಯಾಗಿದ್ದು, ಭಾನುವಾರ ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ.

103 ಮಂದಿಗೆ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 1,058ಕ್ಕೆ ಜಿಗಿದಿದೆ. ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ. ಜತೆಗೆ ಸೋಂಕಿತರ ಸಂಪರ್ಕದಿಂದ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಹರಡಿದೆ.

ಹೊಸದಾಗಿ ಪತ್ತೆಯಾದ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಯಿತು. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರ ಪೈಕಿ 93 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಭಾನುವಾರ ಮನೆಗೆ ಮರಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.