ADVERTISEMENT

ಕೋಲಾರ: ಶತಕದ ಗಡಿ ದಾಟಿದ ಸೋಂಕಿತರ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2020, 13:01 IST
Last Updated 26 ಸೆಪ್ಟೆಂಬರ್ 2020, 13:01 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಹರಡುವಿಕೆಯು ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಶನಿವಾರ ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ.

ಕಳೆದು ಏಳೆಂಟು ದಿನಗಳಿಗೆ ಹೋಲಿಸಿದರೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿರಲಿಲ್ಲ. ಹೊಸದಾಗಿ 105 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 964ಕ್ಕೆ ಜಿಗಿದಿದೆ. ಇದರ ಬೆನ್ನಲ್ಲೇ ಸೋಂಕಿತ ವ್ಯಕ್ತಿಯೊಬ್ಬರು ಕೊನೆಯುಸಿರೆಳೆದಿದ್ದು, ಸೋಂಕಿತರ ಸಾವಿನ ಸಂಖ್ಯೆ 80ಕ್ಕೆ ಏರಿಕೆಯಾಗಿದೆ.

ಮತ್ತೊಂದೆಡೆ ಸೋಂಕಿತರ ಗುಣಮುಖ ಪ್ರಮಾಣದಲ್ಲಿ ಭಾರಿ ಇಳಿಕೆಯಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 25 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಶನಿವಾರ ಮನೆಗೆ ಮರಳಿದರು. ಹೊಸದಾಗಿ ಪತ್ತೆಯಾದ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.