ADVERTISEMENT

ಕೋಲಾರ‌: ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 5 ಜುಲೈ 2023, 13:13 IST
Last Updated 5 ಜುಲೈ 2023, 13:13 IST

ಕೋಲಾರ‌: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 98 ಅಂಕ ಮತ್ತು ಪಿಯುಸಿಯಲ್ಲಿ ಶೇ 95 ಕ್ಕಿಂತ ಹೆಚ್ಚಿನ ಅಂಕ ಪಡೆದ ಒಕ್ಕಲಿಗ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯ ಜೊತೆಗೆ ದೃಢೀಕೃತ ಅಂಕಪಟ್ಟಿ, ಇತ್ತೀಚಿನ ಭಾವಚಿತ್ರ ಹಾಗೂ ಜಾತಿ ಪ್ರಮಾಣ ಪತ್ರದ ಪ್ರತಿಯನ್ನು ಲಗತ್ತಿಸುವುದು ಕಡ್ಡಾಯವಾಗಿರುತ್ತದೆ.

ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ ಎಂದು ಜಿಲ್ಲಾಧ್ಯಕ್ಷ ಕೆ.ವಿ.ಶಂಕರಪ್ಪ ಹಾಗೂ ಕಾರ್ಯದರ್ಶಿ ಪವನ್ ನಾರಾಯಣ ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗಾಗಿ ಮೊ: 7892622332, 8123184371 ಸಂಪರ್ಕಿಸಬಹುದು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.