ಬಂಗಾರಪೇಟೆ: ಮನೆಯಲ್ಲಿದ್ದ ವೃದ್ಧೆಯ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ತಾಲ್ಲೂಕಿನ ದೇವಗಾನಹಳ್ಳಿಯಲ್ಲಿ ಶನಿವಾರ ರಾತ್ರಿ ನಡೆದಿದೆ.
ಗ್ರಾಮದ ಲೇಟ್ ಮುನಿಯಪ್ಪ ಅವರ ಪತ್ನಿ ವೆಂಕಟಲಕ್ಷ್ಮಮ್ಮ ಅವರ 35 ಗ್ರಾಂ ತೂಕದ ಸರವನ್ನು ದುಷ್ಕರ್ಮಿ ಕಿತ್ತುಕೊಂಡು ಪರಾರಿಯಾಗಿದ್ದಾನೆ.
ಮನೆಯಲ್ಲಿ ಒಬ್ಬರೇ ಇರುವುದನ್ನು ಗಮನಿಸಿದ ಅಪರಿಚಿತ ವ್ಯಕ್ತಿ ಜರ್ಕಿನ್ ಮತ್ತು ಮಂಕಿ ಕ್ಯಾಪ್ ಹಾಕಿಕೊಂಡು ಮನೆಯೊಳಕ್ಕೆ ನುಗ್ಗಿದ್ದಾನೆ. ವಿದ್ಯುತ್ ಸಂಪರ್ಕ ತಪ್ಪಿಸಿ ಸರ ಕಸಿದು ಓಡಿಹೋಗಿದ್ದಾನೆ.
ಈ ಸಂಬಂಧ ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.