ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕೋಲಾರಮ್ಮ ದೇಗುಲಕ್ಕೆ ಭೇಟಿ ನೀಡಿದ್ದರು.
ಕೋಲಾರ: ಪಾಕಿಸ್ತಾನದ ಉಗ್ರರ ನೆಲೆ ಮೇಲೆ ದಾಳಿ ನಡೆಸಿರುವ ಭಾರತದ ಸೈನಿಕರ ಒಳಿತಿಗಾಗಿ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶೇಷ ಪೂಜೆ ಸಲ್ಲಿಸಿದರು.
ನಗರ ದೇವತೆ ಕೋಲಾರಮ್ಮ ದೇಗುಲಕ್ಕೆ ಭೇಟಿ ನೀಡಿದ ಅವರು ದೇವರ ದರ್ಶನ ಪಡೆದರು. ಕಾರ್ಯಕರ್ತರ ಜಯಘೋಷಗಳ ನಡುವೆ ಅರ್ಚಕರು ಮಂತ್ರ ಪಠಿಸಿದರು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಸದಸ್ಯ ಎನ್.ರವಿಕುಮಾರ್, ಮಾಜಿ ಸಚಿವರಾದವಬಿ.ಶ್ರೀರಾಮುಲು, ವರ್ತೂರು ಪ್ರಕಾಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.