ADVERTISEMENT

ಕೋಲಾರದಲ್ಲಿ ಸರ್ಕಾರಿ ಬಸ್‌ಗಳ ಮೇಲೆ ಕಲ್ಲು ತೂರಾಟ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2020, 10:54 IST
Last Updated 11 ಡಿಸೆಂಬರ್ 2020, 10:54 IST
ಸಾರಿಗೆ ನೌಕರರ ಒಕ್ಕೂಟದ ಮುಷ್ಕರದ ನಡುವೆ ಕೋಲಾರ ಜಿಲ್ಲೆಯ ಬಂಗಾರಪೇಟೆ ನಿಲ್ದಾಣದಲ್ಲಿ ದುಷ್ಕರ್ಮಿಗಳು ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಶುಕ್ರವಾರ ಕಲ್ಲು ತೂರಿ ಗಾಜು ಜಖಂಗೊಳಿಸಿರುವುದು.
ಸಾರಿಗೆ ನೌಕರರ ಒಕ್ಕೂಟದ ಮುಷ್ಕರದ ನಡುವೆ ಕೋಲಾರ ಜಿಲ್ಲೆಯ ಬಂಗಾರಪೇಟೆ ನಿಲ್ದಾಣದಲ್ಲಿ ದುಷ್ಕರ್ಮಿಗಳು ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಶುಕ್ರವಾರ ಕಲ್ಲು ತೂರಿ ಗಾಜು ಜಖಂಗೊಳಿಸಿರುವುದು.   

‌ಕೋಲಾರ: ಸಾರಿಗೆ ನೌಕರರ ಒಕ್ಕೂಟದ ಮುಷ್ಕರದ ಕರೆ ಬೆಂಬಲಿಸಿ ಕೆಎಸ್‌ಆರ್‌ಟಿಸಿ ನೌಕರರು ಜಿಲ್ಲೆಯಾದ್ಯಂತ ಶುಕ್ರವಾರ ಕರ್ತವ್ಯಕ್ಕೆ ಗೈರಾಗಿದ್ದರಿಂದ ಬಸ್‌ ಸೇವೆ ಸಂಪೂರ್ಣ ಸ್ಥಗಿತಗೊಂಡು ಜನಜೀವನಕ್ಕೆ ತೊಂದರೆಯಾಯಿತು.

ಮುಷ್ಕರದ ನಡುವೆ ಬಂಗಾರಪೇಟೆ ತಾಲ್ಲೂಕಿನಲ್ಲಿ ಕಿಡಿಗೇಡಿಗಳು ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, 4 ಬಸ್‌ಗಳ ಗಾಜು ಪುಡಿಪುಡಿಯಾಗಿವೆ. ಬಂಗಾರಪೇಟೆ ನಿಲ್ದಾಣದಲ್ಲಿ 3 ಬಸ್‌ಗಳ ಮೇಲೆ ಬೆಳಗಿನ ಜಾವ ಕಲ್ಲು ತೂರಲಾಗಿದೆ. ಕೆಜಿಎಫ್‌ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್‌ನ ಮೇಲೆ ಬಂಗಾರಪೇಟೆ ತಾಲ್ಲೂಕಿನ ಬೆಂಗನೂರು ಸಮೀಪ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.

‘ದುಷ್ಕರ್ಮಿಗಳು ಹೆಲ್ಮೆಟ್‌ ಧರಿಸಿ ಬೈಕ್‌ನಲ್ಲಿ ಬಂದು ಬಸ್‌ಗಳ ಮೇಲೆ ಕಲ್ಲು ತೂರಿ ಪರಾರಿಯಾಗಿದ್ದಾರೆ. ಹೀಗಾಗಿ ಅವರ ಗುರುತು ಪತ್ತೆಯಾಗಿಲ್ಲ’ ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಎಸ್‌.ಚಂದ್ರಶೇಖರ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.