ADVERTISEMENT

ಕೋಲಾರ | ಡಿಡಿಪಿಐ ಕಚೇರಿಯಲ್ಲಿ ಫೋನ್‌–ಇನ್‌ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 15 ಜೂನ್ 2020, 14:00 IST
Last Updated 15 ಜೂನ್ 2020, 14:00 IST

ಕೋಲಾರ: ಎಸ್ಸೆಸ್ಸೆಲ್ಸಿ ಪರೀಕ್ಷೆ ಜೂನ್‌ 25ರಿಂದ ಆರಂಭವಾಗಲಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಆತಂಕ ನಿವಾರಣೆಗಾಗಿ ಜಿಲ್ಲಾ ಕೇಂದ್ರದ ಡಿಡಿಪಿಐ ಕಚೇರಿಯಲ್ಲಿ ಜೂನ್‌ 17ರಂದು ಫೋನ್‌–ಇನ್‌ ಕಾರ್ಯಕ್ರಮ ಹಮ್ಮಿಕೊಂಡಿದೆ.

ಡಿಡಿಪಿಐ ಕೆ.ರತ್ನಯ್ಯ ನೇತೃತ್ವದಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಫೋನ್–ಇನ್ ಕಾರ್ಯಕ್ರಮ ನಡೆಯಲಿದೆ. ವಿದ್ಯಾರ್ಥಿಗಳು ಪರೀಕ್ಷಾ ಸಿದ್ಧತೆ, ಕೇಂದ್ರದಲ್ಲಿನ ವ್ಯವಸ್ಥೆ, ಪರೀಕ್ಷಾ ಕೇಂದ್ರಗಳ ಕುರಿತಾದ ಮಾಹಿತಿಯನ್ನು ಕೇಳಿ ತಿಳಿದುಕೊಳ್ಳಬಹುದು ಎಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಜಿಲ್ಲಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದರ ಜತೆಗೆ ಆತ್ಮಸ್ಥೈರ್ಯ ತುಂಬಲಾಗುತ್ತದೆ. ಈ ಹಿಂದೆ ನಡೆದ ಫೋನ್‌–ಇನ್ ಕಾರ್ಯಕ್ರಮಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಕರೆ ಮಾಡಿದ್ದರು. ವಿದ್ಯಾರ್ಥಿಗಳು ಮತ್ತೊಮ್ಮೆ ತಮ್ಮ ಸಮಸ್ಯೆಗಳ ಪರಿಹಾರಕ್ಕೆ ವೇದಿಕೆ ಕಲ್ಪಿಸುವಂತೆ ಕೋರಿದ್ದರಿಂದ ಪುನಃ ಫೋನ್‌–ಇನ್ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ADVERTISEMENT

ಪಠ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ಪರಿಹರಿಸಿಕೊಳ್ಳಲು ಮಕ್ಕಳು ಕರೆ ಮಾಡಬಹುದು. ಫೋನ್–ಇನ್ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸುತ್ತಾರೆ. ವಿದ್ಯಾರ್ಥಿಗಳು ದೂರವಾಣಿ ಸಂಖ್ಯೆ 08152-225241 ಅಥವಾ ಮೊಬೈಲ್‌ ಸಂಖ್ಯೆ 9448999345ಕ್ಕೆ ಕರೆ ಮಾಡಿ ಪ್ರಯೋಜನ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.