ADVERTISEMENT

ಅಧಿಕಾರ ವ್ಯಾಮೋಹವಿಲ್ಲ: ರಮೇಶ್‌ಕುಮಾರ್‌

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 14:44 IST
Last Updated 18 ಫೆಬ್ರುವರಿ 2021, 14:44 IST
ಶಾಸಕ ಕೆ.ಆರ್‌.ರಮೇಶ್‌ಕುಮಾರ್‌ ಕೋಲಾರ ತಾಲ್ಲೂಕಿನ ಜನ್ನಘಟ್ಟ ಗ್ರಾಮದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುರುವಾರ ಗುದ್ದಲಿ ಪೂಜೆ ನೆರವೇರಿಸಿದರು.
ಶಾಸಕ ಕೆ.ಆರ್‌.ರಮೇಶ್‌ಕುಮಾರ್‌ ಕೋಲಾರ ತಾಲ್ಲೂಕಿನ ಜನ್ನಘಟ್ಟ ಗ್ರಾಮದಲ್ಲಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುರುವಾರ ಗುದ್ದಲಿ ಪೂಜೆ ನೆರವೇರಿಸಿದರು.   

ಕೋಲಾರ: ‘ನನಗೆ ಅಧಿಕಾರ ವ್ಯಾಮೋಹವಿಲ್ಲ. ಮತ ನೀಡಿದ ಜನರ ಋಣ ತೀರಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ’ ಎಂದು ಶಾಸಕ ಕೆ.ಆರ್.ರಮೇಶ್‌ಕುಮಾರ್‌ ಹೇಳಿದರು.

ತಾಲ್ಲೂಕಿನ ಜನ್ನಘಟ್ಟ ಗ್ರಾಮದಲ್ಲಿ ಗುರುವಾರ ಶ್ರೀನಿವಾಸಪುರ ರಸ್ತೆಯಿಂದ ಜನ್ನಘಟ್ಟ ಗ್ರಾಮದವರೆಗಿನ ಮತ್ತು ಜನಘಟ್ಟ ಗ್ರಾಮದಿಂದ–ಕಲ್ಲೂರು ಕ್ರಾಸ್‌ವರೆಗಿನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

‘ಜನ ನನ್ನ ನಂಬಿ ಮತ ಹಾಕಿದ್ದಾರೆ. ಜನರಿಗಾಗಿ ಅಭಿವೃದ್ಧಿ ಕೆಲಸ ಮಾಡುತ್ತೀದ್ದೇನೆ. ಬೇರೆಯವರು ನನ್ನ ವಿರುದ್ಧ ಏನಾದರೂ ಮಾತನಾಡಿಕೊಳ್ಳಲಿ. ಜನರ ಕೆಲಸದಿಂದ ಹಿಂದೆ ಸರಿಯಲ್ಲ. ಅವರ ಋಣ ತೀರಿಸುವೆ. ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು’ ಎಂದು ಗುತ್ತಿಗೆದಾರರಿಗೆ ಸೂಚಿಸಿದರು.

ADVERTISEMENT

ಜನ್ನಘಟ್ಟ ಗ್ರಾ.ಪಂ ಅಧ್ಯಕ್ಷ ವಿ.ಸತೀಶ್‌ಮೂರ್ತಿ, ಸದಸ್ಯರು, ಜಿ.ಪಂ ಮಾಜಿ ಅಧ್ಯಕ್ಷ ವಿ.ವೆಂಕಟಮುನಿಯಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎಲ್‌.ಅನಿಲ್‌ಕುಮಾರ್‌, ಎಪಿಎಂಸಿ ಮಾಜಿ ಉಪಾಧ್ಯಕ್ಷ ಟಿ.ವಿ.ಕೃಷ್ಣಪ್ಪ, ಸುಗಟೂರು ಎಸ್‌ಎಫ್‌ಎಸ್‌ಸಿ ಅಧ್ಯಕ್ಷ ತಿಮ್ಮರಾಯಪ್ಪ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಕೃಷ್ಣೇಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.