ADVERTISEMENT

ನಿರ್ಗತಿಕ ವ್ಯಕ್ತಿಯ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 16:23 IST
Last Updated 10 ಜುಲೈ 2020, 16:23 IST
ಕೋಲಾರದ ಟಮಕ ಬಳಿ ಅನಾರೋಗ್ಯದಿಂದ ಬಳಲುತ್ತಿದ್ದ ನಿರ್ಗತಿಕ ವ್ಯಕ್ತಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ್ ನೇತೃತ್ವದಲ್ಲಿ ಶುಕ್ರವಾರ ರಕ್ಷಣೆ ಮಾಡಲಾಯಿತು.
ಕೋಲಾರದ ಟಮಕ ಬಳಿ ಅನಾರೋಗ್ಯದಿಂದ ಬಳಲುತ್ತಿದ್ದ ನಿರ್ಗತಿಕ ವ್ಯಕ್ತಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ್ ನೇತೃತ್ವದಲ್ಲಿ ಶುಕ್ರವಾರ ರಕ್ಷಣೆ ಮಾಡಲಾಯಿತು.   

ಕೋಲಾರ: ನಗರದ ಟಮಕ ಕೈಗಾರಿಕಾ ಪ್ರದೇಶದಲ್ಲಿ 10 ವರ್ಷಗಳಿಂದ ನಿರ್ಗತಿಕರಾಗಿ ಸುತ್ತಾಡಿಕೊಂಡು ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಜಿಲ್ಲಾ ಅಂಗವಿಲಕರ ಕಲ್ಯಾಣಾಧಿಕಾರಿ ಜಗದೀಶ್‌ ರಕ್ಷಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿರುವ ಈ ವ್ಯಕ್ತಿ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿ ಆಧರಿಸಿ ಸಿಬ್ಬಂದಿ ಜತೆ ಸ್ಥಳಕ್ಕೆ ಹೋದ ಜಗದೀಶ್‌ ವ್ಯಕ್ತಿಯನ್ನು ರಕ್ಷಿಸಿದರು. ಬಳಿಕ ಬೆಂಗಳೂರಿನ ಹೋಮ್ ಫಾರ್ ಹೋಪ್‌ ಕೇಂದ್ರಕ್ಕೆ ಸ್ಥಳಾಂತರಿಸಿದರು.

‘ಹಿರಿಯ ನಾಗರೀಕರಾದ ರಮಾನಾಥ್ ಮತ್ತು ಸ್ನೇಹಿತರು ಈ ನಿರ್ಗತಿಕ ವ್ಯಕ್ತಿಯನ್ನು ಗುರುತಿಸಿ ಇಲಾಖೆಯ ಗಮನ ಸೆಳೆದರು. ಸಾರ್ವಜನಿಕರು ಸಂಕಷ್ಟದಲ್ಲಿರುವ ಹಿರಿಯ ನಾಗರೀಕರ ಬಗ್ಗೆ ಇಲಾಖೆಗೆ ಮಾಹಿತಿ ನೀಡಿದರೆ ಅಂತಹವರನ್ನು ರಕ್ಷಣೆ ಮಾಡುತ್ತೇವೆ’ ಎಂದು ಜಗದೀಶ್ ಸುದ್ದಿಗಾರರಿಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.