ADVERTISEMENT

ಶ್ರೀನಿವಾಸಪುರ: ವಿದ್ಯಾರ್ಥಿನಿಯರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2021, 5:31 IST
Last Updated 10 ಸೆಪ್ಟೆಂಬರ್ 2021, 5:31 IST
ಶ್ರೀನಿವಾಸಪುರದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮುಖಂಡ ಗುಂಜೂರು ಆರ್. ಶ್ರೀನಿವಾಸರೆಡ್ಡಿ ಹಾಗೂ ಅವರ ಬೆಂಬಲಿಗರು ಹಾಜರಿದ್ದರು
ಶ್ರೀನಿವಾಸಪುರದಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮುಖಂಡ ಗುಂಜೂರು ಆರ್. ಶ್ರೀನಿವಾಸರೆಡ್ಡಿ ಹಾಗೂ ಅವರ ಬೆಂಬಲಿಗರು ಹಾಜರಿದ್ದರು   

ಶ್ರೀನಿವಾಸಪುರ: ತಾಲ್ಲೂಕಿನ ತಾಡಿಗೋಳ್ ಕ್ರಾಸ್‌ನಲ್ಲಿ ಈಚೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಕೆಲವರು ನಡೆಸಿದ ಹಲ್ಲೆ ಖಂಡಿಸಿ ತಾಲ್ಲೂಕು ಎಸ್ಎಫ್ಐ ಘಟಕದ ವಿದ್ಯಾರ್ಥಿಗಳು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಸಂದರ್ಭದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವುದು ಖಂಡನೀಯ. ಈ ಘಟನೆಯಿಂದ ಪೋಷಕರು ಹೆಣ್ಣುಮಕ್ಕಳನ್ನು ಶಾಲಾ, ಕಾಲೇಜಿಗೆ ಕಳುಹಿಸಲು ಹೆದರುವಂತಾಗಿದೆ ಎಂದು ತಹಶೀಲ್ದಾರ್‌ಗೆ ನೀಡಿದ ಮನವಿ ಪತ್ರದಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು. ಸಂಬಂಧಪಟ್ಟ ಅಧಿಕಾರಿಗಳು ಶಾಲಾ, ಕಾಲೇಜುಗಳಲ್ಲಿ ಕುಂದುಕೊರತೆ ವಿಚಾರಣಾ ಸಭೆ ನಡೆಸಬೇಕು. ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಹಶೀಲ್ದಾರ್‌ಗೆ ನೀಡಲಾಯಿತು. ಎಸ್ಎಫ್ಐ ಜಿಲ್ಲಾ ಉಪಾಧ್ಯಕ್ಷ ಶ್ರೀಕಾಂತ್, ತಾಲ್ಲೂಕು ಘಟಕದ ಅಧ್ಯಕ್ಷ ಉದಯ್, ಜಂಟಿ ಕಾರ್ಯದರ್ಶಿ ಚೈತ್ರಾ, ಮುಖಂಡ ಚಂದ್ರಶೇಖರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.