ADVERTISEMENT

ಕೋಲಾರ: ‌ಜಿಲ್ಲೆಯ 15,652 ವಿದ್ಯಾರ್ಥಿಗಳು ಉತ್ತೀರ್ಣ

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 15:52 IST
Last Updated 20 ಜುಲೈ 2021, 15:52 IST
ರಾಮಚಂದ್ರಪ್ಪ
ರಾಮಚಂದ್ರಪ್ಪ   

ಕೋಲಾರ: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಜಿಲ್ಲೆಯ 15,652 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕೋವಿಡ್‌ ಆತಂಕದ ಕಾರಣಕ್ಕೆ ಈ ಬಾರಿ ಪರೀಕ್ಷೆ ನಡೆಯದ ಕಾರಣ ಪದವಿ ಪೂರ್ವ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ, ಪ್ರಥಮ ಪಿಯುಸಿ ಹಾಗೂ ಗ್ರೇಸ್‌ ಅಂಕದ ಆಧಾರದಲ್ಲಿ ಈ ಫಲಿತಾಂಶ ಘೋಷಿಸಿದೆ.

ಉತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ 7,749 ಬಾಲಕರು ಹಾಗೂ 7,903 ಮಂದಿ ಬಾಲಕಿಯರು ಸೇರಿದ್ದಾರೆ. ಆಂಗ್ಲ ಮಾಧ್ಯಮದ 11,278 ವಿದ್ಯಾರ್ಥಿಗಳು ಹಾಗೂ ಕನ್ನಡ ಮಾಧ್ಯಮದ 4,374 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 1,060 ಬಾಲಕರು ಮತ್ತು 1,083 ಬಾಲಕಿಯರು ಸೇರಿದಂತೆ ಒಟ್ಟಾರೆ 2,143 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ADVERTISEMENT

ವಾಣಿಜ್ಯ ವಿಭಾಗದಲ್ಲಿ 4,283 ಬಾಲಕರು ಹಾಗೂ 4,020 ಬಾಲಕಿಯರು ಸೇರಿದಂತೆ 8,312 ಮಂದಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 2,406 ಬಾಲಕರು ಹಾಗೂ 2,791 ಬಾಲಕಿಯರು ಸೇರಿದಂತೆ ಒಟ್ಟು 5,197 ಮಂದಿ ಉತ್ತೀರ್ಣರಾಗಿದ್ದಾರೆ.

ನಗರ ಪ್ರದೇಶದ 12,352 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಇವರಲ್ಲಿ 6,060 ಬಾಲಕರು ಹಾಗೂ 6,292 ಬಾಲಕಿಯರು ಸೇರಿದ್ದಾರೆ. ಗ್ರಾಮೀಣ ಪ್ರದೇಶದ 3,300 ಮಂದಿ ತೇರ್ಗಡೆಯಾಗಿದ್ದು, ಈ ಪೈಕಿ 1,689 ಬಾಲಕರು ಮತ್ತು 1,611 ಬಾಲಕಿಯರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.