ADVERTISEMENT

ಕೆಜಿಎಫ್‌: ರಾಮಲಿಂಗೇಶ್ವರ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2023, 6:06 IST
Last Updated 20 ಫೆಬ್ರುವರಿ 2023, 6:06 IST
ಕೆಜಿಎಫ್‌ ರಾಬರ್ಟಸನ್‌ಪೇಟೆಯಲ್ಲಿ ಭಾನುವಾರ ರಾಮಲಿಂಗೇಶ್ವರ ರಥೋತ್ಸವ ನಡೆಯಿತು
ಕೆಜಿಎಫ್‌ ರಾಬರ್ಟಸನ್‌ಪೇಟೆಯಲ್ಲಿ ಭಾನುವಾರ ರಾಮಲಿಂಗೇಶ್ವರ ರಥೋತ್ಸವ ನಡೆಯಿತು   

ಕೆಜಿಎಫ್‌: ರಾಬರ್ಟಸನ್‌ಪೇಟೆಯ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ ಭಾನುವಾರ ಶ್ರದ್ಧಾಭಕ್ತಿಯಿಂದ ನಡೆಯಿತು.

ಅಂಕುರಾರ್ಪಣೆ ಕಾರ್ಯಕ್ರಮದ ಮೂಲಕ ಬುಧವಾರದಿಂದ ಪ್ರಾರಂಭವಾದ 60ನೇ ವರ್ಷದ ಬ್ರಹ್ಮೋತ್ಸವದ ಅಂಗವಾಗಿ ಮಹಾಶಿವರಾತ್ರಿ ರುದ್ರಾಭಿಷೇಕದ ನಂತರ ದೇವಾಲಯದ ಬಳಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಗೀತಾ ರಸ್ತೆಯಲ್ಲಿ ಸಾಗಿದ ರಥಕ್ಕೆ ಭಕ್ತರು ಬಾಳೆ ಹಣ್ಣು ಮತ್ತು ದವನ ಎಸೆದು ಕೃತಾರ್ಥರಾದರು. ಮಹಿಳೆಯರು ಮನೆ ಮುಂಭಾಗದಲ್ಲಿ ಸಿಂಗಾರ ಮಾಡಿ ರಥಕ್ಕೆ ಸ್ವಾಗತ ಕೋರಿದರು. ಸನಾತನ ಧರ್ಮಸಭಾದ ಅಧ್ಯಕ್ಷ ಡಾ.ಮಂಜುನಾಥ್‌, ರಥೋತ್ಸವ ಸಮಿತಿ ಅಧ್ಯಕ್ಷ ನಾರಾಯಣಮೂರ್ತಿ, ಗುರುಸ್ವಾಮಿ, ಕೃಷ್ಣಮೂರ್ತಿ, ರಾಮಕೃಷ್ಣ, ಜಗದೀಶ್‌ ಭಾಗವಹಿಸಿದ್ದರು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.