ಮುಳಬಾಗಿಲು: ಕಳೆದ ವರ್ಷ 2022ರ ಅಕ್ಟೋಬರ್ 9ರಂದು ತಾಲ್ಲೂಕಿನ ಗ್ರಾಮವೊಂದರ ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದ ಆರೋಪಿಗೆ ಕೋಲಾರ ಸೆಷನ್ಸ್ ನ್ಯಾಯಾಲಯ 30ವರ್ಷ ಜೈಲು ಶಿಕ್ಷೆ ಮತ್ತು ₹50 ದಂಡ ವಿಧಿಸಿ ಆದೇಶ ನೀಡಿದೆ.
ಮುರುಗೇಶ್ (32) ಎಂಟು ವರ್ಷದ ಬಾಲಕಿಯನ್ನು ಪುಸಲಾಯಿಸಿ ಚಾಕೊಲೇಟ್ ಕೊಡಿಸುವ ನೆಪದಲ್ಲಿ ತನ್ನ ಮನೆಗೆ ಎತ್ತಿಕೊಂಡು ಹೋಗಿ ಅತ್ಯಾಚಾರ ಮಾಡಿದ್ದ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸಂತ್ರಸ್ತೆ ಪರವಾಗಿ ಸರ್ಕಾರಿ ಅಭಿಯೋಜಕರಾದ ಡಿ.ಲಲಿತ ಕುಮಾರಿ ವಾದ ಮಂಡಿಸಿದ್ದರು. ಬಾಲಕಿಗೆ ₹5 ಲಕ್ಷ್ಮ ಪರಿಹಾರ ಘೋಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.