ADVERTISEMENT

ಲೈಂಗಿಕ ದೌರ್ಜನ್ಯ 20 ವರ್ಷ ಜೈಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2022, 21:24 IST
Last Updated 7 ಅಕ್ಟೋಬರ್ 2022, 21:24 IST
   

ಕೋಲಾರ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕೆಜಿಎಫ್‌ ತಾಲ್ಲೂಕು ಆ್ಯಂಡರ್‌ಸನ್‌ಪೇಟೆ ಪೊಲೀಸ್ ಠಾಣಾ ಸರಹದ್ದಿನ ಕ್ಯಾಸಂಬಳ್ಳಿ ಹೋಬಳಿ ಗ್ರಾಮವೊಂದರ ನಿವಾಸಿ ಕಣ್ಣಪ್ಪ ಎಂಬಾತನಿಗೆ ಇಲ್ಲಿನ ಪೋಕ್ಸೊ ವಿಶೇಷ ನ್ಯಾಯಾಲಯವುಗುರುವಾರ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

2020ರ ಫೆ.3ರಂದು ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಬಾಗಿಲು ಹಾಕಿಕೊಂಡು ಬಾಯಿಗೆ ಬಟ್ಟೆ ತುರುಕಿ, ಲೈಂಗಿಕ ದೌರ್ಜನ್ಯ ಎಸಗಿರುವುದು ತನಿಖೆಯಿಂದ ಸಾಬೀತಾಗಿದೆ. ಪ್ರಕರಣ ದಾಖಲಿಸಿಕೊಂಡ ಆ್ಯಂಡರ್‌ಸನ್‌ಪೇಟೆ ಪೊಲೀಸರು ತನಿಖೆ ಕೈಗೊಂಡು ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಪಿ.ದೇವಮಾನೆ ಅವರು, ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ₹ 21 ಸಾವಿರ ದಂಡ ವಿಧಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.