ADVERTISEMENT

ಎಕರೆಗೆ ₹2 ಲಕ್ಷ ಪರಿಹಾರ ಕೊಡಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2021, 6:08 IST
Last Updated 25 ನವೆಂಬರ್ 2021, 6:08 IST
ಬಂಗಾರಪೇಟೆ ತಾಲ್ಲೂಕಿನಲ್ಲಿ ಮಳೆಹಾನಿಯಿಂದಾದ ಬೆಳೆ ನಷ್ಟಕ್ಕೆ ಎಕರೆಗೆ ₹2 ಲಕ್ಷ ಪರಿಹಾರ ಕೊಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತಸಂಘ ಕೆ.ಎಸ್.ಪುಟ್ಟಣ್ಣಯ್ಯ ಬಣದ ಸದಸ್ಯರು ಬೆಳೆ ಸಮೀಕ್ಷೆಗೆ ಬಂದಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಬಂಗಾರಪೇಟೆ ತಾಲ್ಲೂಕಿನಲ್ಲಿ ಮಳೆಹಾನಿಯಿಂದಾದ ಬೆಳೆ ನಷ್ಟಕ್ಕೆ ಎಕರೆಗೆ ₹2 ಲಕ್ಷ ಪರಿಹಾರ ಕೊಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತಸಂಘ ಕೆ.ಎಸ್.ಪುಟ್ಟಣ್ಣಯ್ಯ ಬಣದ ಸದಸ್ಯರು ಬೆಳೆ ಸಮೀಕ್ಷೆಗೆ ಬಂದಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.   

ಬಂಗಾರಪೇಟೆ: ಮಳೆಹಾನಿಯಿಂದಾದ ಬೆಳೆ ನಷ್ಟಕ್ಕೆ ಎಕರೆಗೆ ₹2 ಲಕ್ಷ ಪರಿಹಾರ ಕೊಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತಸಂಘ ಕೆ.ಎಸ್.ಪುಟ್ಟಣ್ಣಯ್ಯ ಬಣದ ಸದಸ್ಯರು ಬೆಳೆ ಸಮೀಕ್ಷೆಗೆ ಬಂದಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ತಾಲ್ಲೂಕಿನಾದ್ಯಂತ ಸಾವಿರಾರು ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ ಬೆಳೆಗಳು ನಾಶವಾಗಿದೆ. ಕೃಷಿ ಬೆಳೆಗೆ ಎಕರೆಗೆಕನಿಷ್ಠ ₹1 ಲಕ್ಷ, ತೋಟಗಾರಿಕೆ, ವಾಣಿಜ್ಯ ಬೆಳೆಗೆ ಎಕರೆಗೆ ₹1.5 ಲಕ್ಷ ಖರ್ಚು ಮಾಡಿ ಬೆಳೆ ಬೆಳೆಯಲಾಗಿತ್ತು. ಸತತ ಮಳೆಯಿಂದಾಗಿ ಅದೆಲ್ಲಾ ಸಂಪೂರ್ಣ ನಾಶವಾಗಿದೆ ಎಂದರು.

ಅಲ್ಲದೆ ತಾಲ್ಲೂಕಿನಾದ್ಯಂತ ನೂರಾರು ಮನೆಗಳು ಕುಸಿದಿವೆ. ಜಾನುವಾರು ಕೂಡ ಮಳೆಗೆ ತತ್ತರಿಸಿದೆ. ಮನೆ ಕಳೆದುಕೊಂಡ ಫಲಾನುಭವಿಗಳಿಗೆ ಕನಿಷ್ಠ ₹2 ಲಕ್ಷ ನೀಡುವಂತೆ ಸರ್ಕಾರವನ್ನು ಒತ್ತಾಯಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್ ಅವರು ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ, ಕೆ.ವೈ.ನಂಜೇಗೌಡ, ಶ್ರೀನಿವಾಸಗೌಡರ ಸಮ್ಮುಖದಲ್ಲಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ADVERTISEMENT

ಐತಾಂಡಹಳ್ಳಿ ಅಮರೇಶ, ಬಾವರಹಳ್ಳಿ ಅತಿತ್ರೆಹಮಾನ್, ಸೊಣ್ಣೇಗೌಡ, ಕಾರಹಳ್ಳಿ ಮಂಜುನಾಥ, ಅವೀನ್, ಹರೀಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.