ADVERTISEMENT

ಕೋಲಾರ: ಜಾಲಪ್ಪ ಚೇತರಿಕೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2021, 5:06 IST
Last Updated 12 ಡಿಸೆಂಬರ್ 2021, 5:06 IST

ಕೋಲಾರ: ಕೇಂದ್ರದ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ದೇಹಸ್ಥಿತಿ ಸುಧಾರಿಸಿದ್ದು, ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಯತ್ತ ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ.

ಕೋವಿಡ್ ಭೀತಿ ಕಾರಣಕ್ಕೆ ಜಾಲಪ್ಪ ಅವರ ಅಭಿಮಾನಿಗಳು ಹಾಗೂ ಹಿತೈಷಿಗಳಿಗೆ ಆಸ್ಪತ್ರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಹೀಗಾಗಿ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರು ಜಾಲಪ್ಪರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸುತ್ತಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜಾಲಪ್ಪರ ಆರೋಗ್ಯ ವಿಚಾರಿಸಲು ಭಾನುವಾರ (ಡಿ.12) ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.

ADVERTISEMENT

‘ಶುಕ್ರವಾರಕ್ಕೆ ಹೋಲಿಸಿದರೆ ಜಾಲಪ್ಪ ಅವರ ಆರೋಗ್ಯ ಶನಿವಾರ ಕೊಂಚ ಸುಧಾರಿಸಿದೆ’ ಎಂದು ಸಂಬಂಧಿ ಜಿ.ಎಚ್. ನಾಗರಾಜ್ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.