ADVERTISEMENT

ಚೆನ್ನೈ- ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ಅಪಘಾತ: ಕೋಲಾರದ ನಾಲ್ವರು ಸಾವು

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2025, 7:19 IST
Last Updated 3 ಮಾರ್ಚ್ 2025, 7:19 IST
<div class="paragraphs"><p>ಅಪಘಾತಕ್ಕೊಳಗಾದ ಕಾರು</p></div>

ಅಪಘಾತಕ್ಕೊಳಗಾದ ಕಾರು

   

ಬಂಗಾರಪೇಟೆ: ತಾಲ್ಲೂಕಿನ ಕುಪ್ಪನಹಳ್ಳಿ ಬಳಿಯ ನೂತನ ಚೆನ್ನೈ- ಬೆಂಗಳೂರು ಕಾರಿಡಾರ್ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ವರ್ಷದ ಮಗು ಸೇರಿ ನಾಲ್ವರು ಮೃತಪಟ್ಟಿದ್ದಾರೆ.

ಇನ್ನೋವಾ ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಕೆಜಿಎಫ್ ತಾಲ್ಲೂಕಿನ ಕಮ್ಮಸಂದ್ರ ಗ್ರಾಮದ ಮಹೇಶ (45) , ಉದ್ವಿತ (2), ರತ್ನಮ್ಮ (60) ಹಾಗೂ ಬೈಕ್ ಸವಾರ ಮೃತರಾಗಿದ್ದಾರೆ.

ADVERTISEMENT

ಸುಶ್ಮಿತಾ, ವಿರುತ, ಸುಜಾತ, ಸುನಿಲ್​ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಈಚೆಗೆ ಎಕ್ಸ್‌ಪ್ರೆಸ್‌ ವೇ ಕಾಮಗಾರಿ‌ ಮುಗಿದು ಸಂಚಾರಕ್ಕೆ ಅನುವು‌‌ ಮಾಡಿಕೊಡಲಾಗಿತ್ತು.

ಬೆಂಗಳೂರಿನಿಂದ ಕಾರಿನಲ್ಲಿ ವಾಪಸ್ ಗ್ರಾಮಕ್ಕೆ ತೆರಳುವ ವೇಳೆ ಈ ಅವಘಡ ಸಂಭವಿಸಿದೆ. ಅಪಘಾತ ತಪ್ಪಿಸಲು ಕಾರು ಚಾಲಕ ಪ್ರಯತ್ನಿಸಿದ್ದು ನಿಯಂತ್ರಣ ಕಳೆದುಕೊಂಡಿದ್ದಾರೆ. ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.