ADVERTISEMENT

ಎಸ್ಸಿ–ಎಸ್‌ಟಿ ಶಿಕ್ಷಕರ ಸಂಘದ ಸಭೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2021, 12:13 IST
Last Updated 24 ಜನವರಿ 2021, 12:13 IST
ಕೋಲಾರದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಪ್ರಾಥಮಿಕ ಶಾಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ಅವರನ್ನು ಸನ್ಮಾನಿಸಲಾಯಿತು.
ಕೋಲಾರದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಪ್ರಾಥಮಿಕ ಶಾಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ಅವರನ್ನು ಸನ್ಮಾನಿಸಲಾಯಿತು.   

ಕೋಲಾರ: ನಗರದಲ್ಲಿ ಇತ್ತೀಚೆಗೆ ರಾಜ್ಯ ಪ್ರಾಥಮಿಕ ಶಾಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಅಧ್ಯಕ್ಷ ಎನ್.ಮುನಿಯಪ್ಪ, ‘ಜಿಲ್ಲೆಯ ಸರ್ಕಾರಿ ನೌಕರರ ಸಂಘದ ನೂತನ ಸಾರಥಿಯಾಗಿರುವ ಸುರೇಶ್‌ಬಾಬು ಅವರು ಜಿಲ್ಲೆಯಲ್ಲಿ ಎಲ್ಲರನ್ನೂ ಒಗ್ಗೂಡಿಸಿ ಶಿಕ್ಷಕರ ಮತ್ತು ನೌಕರರ ಕುಂದು ಕೊರತೆಗಳಿಗೆ ಸ್ಪಂದಿಸಿ ಸಂಘ ಉತ್ತಮವಾಗಿ ನಡೆಸಿಕೊಂಡು ಹೋಗಬೇಕು’ ಎಂದು ಕೋರಿದರು.

‘ಸುರೇಶ್‌ಬಾಬು ಅವರು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿರುವುದು ಒಳ್ಳೆಯ ಬೆಳವಣಿಗೆ. ಇದರಿಂದ ಹಿಂದುಳಿದ ವರ್ಗಗಳಿಗೆ ಸಾಮಾಜಿಕ ಸ್ಥಾನಮಾನ ಸಿಕ್ಕಿದಂತೆ ಆಗಿದೆ. ಸುರೇಶ್‌ಬಾಬು ಅವರು ಶಿಕ್ಷಕರ ಹಲವು ವರ್ಷಗಳ ಬೇಡಿಕೆಯಾಗಿರುವ ಗುರುಭವನ ಹಾಗೂ ನೌಕರ ಭವನ ನಿರ್ಮಾಣ ಮಾಡಲು ಶ್ರಮಿಸಬೇಕು’ ಎಂದು ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಟಿ.ನಾಗರಾಜ ಮನವಿ ಮಾಡಿದರು.

ADVERTISEMENT

‘ಶಿಕ್ಷಕರ ಮತ್ತು ನೌಕರರ ಕುಂದು ಕೊರತೆಗಳಿಗೆ ಸ್ಪಂದಿಸಬೇಕು. ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ನೌಕರರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು’ ಎಂದು ಕೋರಿದರು.

ಅತ್ಯಂತ ಪ್ರಬಲ: ‘ರಾಜ್ಯದಲ್ಲಿಯೇ ಕೋಲಾರ ಜಿಲ್ಲೆಯು ನೌಕರರ ಸಂಘಟನೆಯಲ್ಲಿ ಅತ್ಯಂತ ಪ್ರಬಲವಾಗಿದೆ. ನನ್ನನ್ನು ಜಿಲ್ಲಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ನೌಕರರಿಗೆ ಹಾಗೂ ರಾಜ್ಯ ಸಂಘದ ಮುಖಂಡರಿಗೆ ಅಭಾರಿಯಾಗಿದ್ದೇನೆ. ನೌಕರರ ಸಮಸ್ಯೆಗಳ ಇತ್ಯರ್ಥಕ್ಕಾಗಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಂಘವನ್ನು ಯಶಸ್ವಿಯಾಗಿ ಮುನ್ನಡೆಸುತ್ತೇನೆ’ ಎಂದು ಸುರೇಶ್‌ಬಾಬು ಭರವಸೆ ನೀಡಿದರು.

ನೌಕರರ ಸಂಘದ ಸದಸ್ಯ ವಿ.ಶ್ರೀರಾಮ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್, ಉಪಾಧ್ಯಕ್ಷರಾದ ಸಿ.ಸೊಣ್ಣಪ್ಪ, ನಾಗರಾಜ್, ಕೆ.ಎಂ.ಮುನಿಸ್ವಾಮಿ, ಸುರೇಶ್, ಸಂಘಟನಾ ಕಾರ್ಯದರ್ಶಿ ಎ.ವೆಂಕಟೇಶ್, ಬೆಂಗಳೂರು ವಿಭಾಗೀಯ ಕಾರ್ಯದರ್ಶಿ ಎನ್.ವಿ.ರಮೇಶ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.