ADVERTISEMENT

ಗಾಂಜಾ ಮಾರಾಟ: ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 30 ಮೇ 2022, 4:41 IST
Last Updated 30 ಮೇ 2022, 4:41 IST

ಕೆಜಿಎಫ್‌: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ರಾಬರ್ಟಸನ್‌ಪೇಟೆ ಪೊಲೀಸರು ಬಂಧಿಸಿದ್ದಾರೆ.

ಪೈಪ್‌ಲೈನ್‌ ಕುಂಟಿ ಗಂಗಮ್ಮ ದೇವಾಲಯದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ 6ನೇ ಕ್ರಾಸ್ ನಿವಾಸಿ ಏಕನಾಥ್‌ ಎಂಬಾತನನ್ನು ಬಂಧಿಸಿ, 250 ಗ್ರಾಂ. ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ 2ನೇ ಬ್ಲಾಕ್‌ ಜನತಾ ಹೌಸ್‌ನಲ್ಲಿ ಗಾಂಜಾ ಮಾರುತ್ತಿದ್ದ ಮಣಿಗಂಡನ್ ಎಂಬಾತನನ್ನು ಬಂಧಿಸಿ, ಆತನಿಂದ 950 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.