ADVERTISEMENT

ಮಾಲೂರು: ಬಾಲಕಿಗೆ ಲೈಂಗಿಕ ಕಿರುಕುಳ, ಆರೋಪಿ ಸೆರೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2021, 5:46 IST
Last Updated 12 ಡಿಸೆಂಬರ್ 2021, 5:46 IST

ಮಾಲೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ತಾಲ್ಲೂಕಿನಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.

ಆರೋಪಿಯು ಮನೆಯಲ್ಲಿ ಬಾಲಿಕಿಗೆ ಟ್ಯೂಷನ್‌ ಹೇಳಿಕೊಡುವ ನೆಪದಲ್ಲಿ ಅಸಭ್ಯ ವರ್ತನೆ ತೋರಿ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಬಾಲಕಿಯು ಪೋಷಕರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪೋಷಕರು ಗುರುವಾರ ಪಟ್ಟಣ ಠಾಣೆಗೆ ದೂರು ನೀಡಿದ್ದರು.

ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.