ADVERTISEMENT

ಲೈಂಗಿಕ ಕಿರುಕುಳ: ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2022, 21:45 IST
Last Updated 3 ಸೆಪ್ಟೆಂಬರ್ 2022, 21:45 IST

ಕೋಲಾರ: ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನಗರದ ಆಸ್ಪತ್ರೆ ಹಾಗೂ ನರ್ಸಿಂಗ್‌ ಕಾಲೇಜೊಂದರಆಡಳಿತಾಧಿಕಾರಿಯಾಗಿದ್ದ ಡಾ.ಜಾನ್ಸನ್‌ ಕುಂದರ್‌ ಎಂಬುವರ ವಿರುದ್ಧ ಇಲ್ಲಿನ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ನರ್ಸಿಂಗ್‌ ಕೋರ್ಸ್‌ನ ಶುಲ್ಕ ಕಡಿಮೆ ಮಾಡುವಂತೆ ಮನವಿ ಸಲ್ಲಿಸಲು ಮೇ 26ರಂದು ಕ್ಯಾಬಿನ್‌ಗೆ ಹೋಗಿದ್ದಾಗ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ’ ಎಂದು ಇಬ್ಬರು ವಿದ್ಯಾರ್ಥಿನಿಯರು ಆ.30ರಂದು ಠಾಣೆಗೆದೂರು ನೀಡಿದ್ದರು.

‘ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ. ಆರೋಪಿ ಜಾನ್ಸನ್‌ ಕುಂದರ್‌ ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ಆರಂಭಿಸಿದ್ದೇವೆ’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.