ಮುಳಬಾಗಿಲು: ನಗರದ ತಿಮ್ಮರಾವುತ್ತನಹಳ್ಳಿ ರಸ್ತೆಯಲ್ಲಿರುವ ಇಂಡಿಯನ್ ಎಟಿಎಂ ಯಂತ್ರದ ವಿದ್ಯುತ್ ಪೆಟ್ಟಿಗೆಯಲ್ಲಿ ಮಂಗಳವಾರ ರಾತ್ರಿ ಶಾರ್ಟ್ ಸರ್ಕಿಟ್ ಆಗಿ, ಬೆಂಕಿ ಹೊತ್ತುಕೊಂಡಿದೆ. ಇದರಿಂದಾಗಿ ಎಟಿಎಂ ಯಂತ್ರದ ಕೇಂದ್ರದಲ್ಲಿದ್ದ ಮರದ ಕಬೋರ್ಡ್ ಸುಟ್ಟು ಕರಕಲು ಆಗಿದೆ.
ಎಟಿಎಂ ಒಳಗಿನ ಬ್ಯಾಟರಿ ಪೆಟ್ಟಿಗೆಯಲ್ಲಿ ಶಾರ್ಟ್ ಸರ್ಕಿಟ್ ಆಗಿ, ಬ್ಯಾಟರಿ ಪೆಟ್ಟಿಗೆಯಲ್ಲಿ ಬೆಂಕಿ ಹೊತ್ತುಕೊಂಡಿದೆ. ಕೂಡಲೇ ಎಚ್ಚೆತ್ತುಕೊಂಡ ಸ್ಥಳೀಯರು, ಬೆಂಕಿ ನಂದಿಸಲು ಹರಸಾಹಸಪಟ್ಟರು. ಜೊತೆಗೆ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಎಟಿಎಂ ಮಿಷನ್‌ಗೆ ಯಾವುದೇ ಹಾನಿಯಾಗಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.