ಕೋಲಾರ: ನಗರ ಹೊರವಲಯಲ್ಲಿರುವ ಬೆಂಗಳೂರು-ತಿರುಪತಿ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ರಾತ್ರಿ ಸ್ಕೈವಾಕ್ ಕುಸಿದು ಬಿದ್ದಿದೆ.
ಇದರಿಂದಾಗಿ ಸುಮಾರು 3 ಕಿ.ಮೀ ವರೆಗೆ ಸಂಚಾರ ದಟ್ಟಣೆ ಉಂಟಾಗಿದೆ.
ಕೊಂಡರಾಜನಹಳ್ಳಿ ಆಂಜನೇಯ ದೇಗುಲ ಬಳಿ ಜಾರ್ಖಂಡ್ ರಾಜ್ಯದ ಟ್ರಕ್ ಗುದ್ದಿ ಈ ಸ್ಕೈವಾಕ್ ಮಧ್ಯದಲ್ಲಿ ತುಂಡಾಗಿದೆ ಎಂದು ಕೆಲ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಟ್ರಕ್ ಮೇಲೆ ಕುಸಿದಿದ್ದು ಯಾರಿಗೂ ಯಾವುದೇ ಅಪಾಯ ಉಂಟಾಗಿಲ್ಲ. ಸ್ಥಳೀಯರು ಚಾಲಕನಿಗೆ ಥಳಿಸಲು ಮುಂದಾದರು ಎಂಬುದು ಗೊತ್ತಾಗಿದೆ.
ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ತಮಿಳುನಾಡು ಹಾಗೂ ಆಂಧ್ರ ಪ್ರದೇಶ , ಇತ್ತ ಬೆಂಗಳೂರು ಕಡೆಗೆ ತೆರಳುವ ಪ್ರಯಾಣಿಕರು ಸಂಚಾರ ದಟ್ಟಣೆಗೆ ಸಿಲುಕಿ ಸುಮಾರು ಎರಡು ಗಂಟೆಯಿಂದ ಕಾಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.