ADVERTISEMENT

ಕೋಲಾರ: ಶಿವಾಜಿ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟ ಖಂಡಿಸಿ ಪ್ರತಿಭಟನೆ

ಬಾಗಲಕೋಟೆಯಲ್ಲಿ ಘಟನೆ, ಬಂಧನಕ್ಕೆ ಶ್ರೀರಾಮಸೇನೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2026, 6:23 IST
Last Updated 24 ಫೆಬ್ರುವರಿ 2026, 6:23 IST
ಕೋಲಾರ ನಗರದಲ್ಲಿ ಸೋಮವಾರ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಕೋಲಾರ ನಗರದಲ್ಲಿ ಸೋಮವಾರ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಕೋಲಾರ: ಬಾಗಲಕೋಟೆಯಲ್ಲಿ ನಡೆದ ಛತ್ರಪತಿ ಶಿವಾಜಿ ಜಯಂತಿ ಮೆರವಣಿಗೆ ಮೇಲೆ ಕಲ್ಲು, ಚಪ್ಪಲಿ ತೂರಾಟ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಕಚೇರಿಗೆ ತೆರಳಿ ಮನವಿ ಪತ್ರ ಸಲ್ಲಿಸಿದರು.

ನಗರದ ಬಸ್‍ ನಿಲ್ದಾಣ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಶ್ರೀರಾಮಸೇನೆ ಕಾರ್ಯಕರ್ತರು ಮಾತನಾಡಿ, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿಯಿಂದಾಗಿ ರಾಜ್ಯದಲ್ಲಿ ಕೋಮು ಗಲಭೆ ಹೆಚ್ಚುತ್ತಿವೆ ಎಂದು ಆರೋಪಿಸಿದರು.

ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಬಹುಸಂಖ್ಯಾತ ಹಿಂದೂಗಳ ವಿರುದ್ಧ ದಮನಕಾರಿ ನೀತಿ ಅನುಸರಿಸುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಕೊನೆಗಾಲ ಬಂದಿದೆ. ಮುಂದಿನ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ADVERTISEMENT

ಬಾಗಲಕೋಟೆಯಲ್ಲಿ ಹಿಂದೂ ಹೃದಯ ಸಾಮ್ರಾಟ ಛತ್ರಪತಿ ಶಿವಾಜಿ ಮೆರವಣಿಗೆಯನ್ನು ಶಾಂತಿಯುತವಾಗಿ ನಡೆಸುತ್ತಿದ್ದಾಗ ದಂಧೆಕೋರರು ವಿನಾಕಾರಣ ಕಲ್ಲು ತೂರಿ ಪೊಲೀಸ್ ಅಧಿಕಾರಿಗಳನ್ನೇ ಗಾಯಗೊಳಿಸಿದ್ದಾರೆ ಎಂದು ಹೇಳಿದರು.

ಬಾಗಲಕೋಟೆ ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್‌ ಅವರಿಗೆ ವಿಧಿಸಿರುವ ನಿಷೇಧ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಶ್ರೀರಾಮಸೇನೆಯ ಚಿನ್ನಪ್ಪ, ಶಬರೀಷ್, ಪ್ರವೀಣ್, ಎಸ್.ಎಂ.ನಾಗರಾಜ್, ಅರುಣ್, ಸುಪ್ರೀತ್, ಪ್ರಶಾಂತ್ ಯಾದವ್, ಕಿಲಾರಿಪೇಟೆ ನಾಗ, ಆದಿ, ಮೋಹನ್, ನಾಗೇಂದ್ರ, ಅಪ್ಪು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.