ADVERTISEMENT

ಶಾಂತಿ, ಸಹಬಾಳ್ವೆಗೆ ಮಾನವ ಹಕ್ಕು ಪಾಲಿಸಿ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2025, 6:47 IST
Last Updated 11 ಡಿಸೆಂಬರ್ 2025, 6:47 IST
ಶ್ರೀನಿವಾಸಪುರದಲ್ಲಿ ಬುಧವಾರ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಡಿವೈಎಸ್ಪಿ ಮನಿಷಾ ಉದ್ಘಾಟಿಸಿದರು
ಶ್ರೀನಿವಾಸಪುರದಲ್ಲಿ ಬುಧವಾರ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಡಿವೈಎಸ್ಪಿ ಮನಿಷಾ ಉದ್ಘಾಟಿಸಿದರು   

ಶ್ರೀನಿವಾಸಪುರ: ಸಮಾಜದಲ್ಲಿ ಶಾಂತಿಯುತ ಸಹಬಾಳ್ವೆ ಹಾಗೂ ಸುವ್ಯವಸ್ಥೆ ಕಾಪಾಡಲು ಪ್ರತಿಯೊಬ್ಬರೂ ಮಾನವ ಹಕ್ಕುಗಳನ್ನು ಗೌರವಿಸಬೇಕು. ಅವುಗಳಿಗೆ ಚ್ಯುತಿ ಬರದಂತೆ ಎಚ್ಚರ ವಹಿಸಬೇಕು ಎಂದು ಮುಳಬಾಗಿಲು ವಿಭಾಗದ ಡಿವೈಎಸ್ಪಿ ಮನಿಷಾ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಜಾಗೃತಿ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆ, ವಿಶ್ವಮಾನವ ಡಾ.ರಾಜ್‌ಕುಮಾರ್ ಜನಸೇವಾ ಫೌಂಡೇಷನ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ಬುಧವಾರ ನಡೆದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಜನರು ಸೈಬರ್ ಅಪರಾಧಗಳ ಬಗ್ಗೆ ಎಚ್ಚರದಿಂದಿರಬೇಕು. ಒಟಿಪಿಯನ್ನು ಯಾರೊಂದಿಗೂ ಹಂಚಿಕೊಳ್ಳಬಾರದು. ಅಗತ್ಯವಿದ್ದಲ್ಲಿ ಪೊಲೀಸ್ ಇಲಾಖೆ ನೆರವು ಪಡೆದುಕೊಳ್ಳಬೇಕು ಎಂದರು.

ADVERTISEMENT

ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಆರ್.ಶಿವಕುಮಾರಗೌಡ, ‘ಮಾನವ ಹಕ್ಕುಗಳನ್ನು ರಕ್ಷಣೆ ಮಾಡುವುದರ ಮೂಲಕ ಅಂಬೇಡ್ಕರ್ ಆಶಯ ಈಡೇರುವಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳು ಅನಗತ್ಯವಾಗಿ ಮೊಬೈಲ್ ಫೋನ್ ಬಳಸುವುದನ್ನು ಬಿಡಬೇಕು’ ಎಂದು ಹೇಳಿದರು.

ತಹಶೀಲ್ದಾರ್ ಸುಧೀಂದ್ರ ಮಾತನಾಡಿ, ‘ಮಾನವ ಹಕ್ಕುಗಳಿಗೆ ಐತಿಹಾಸಿಕ ಹಾಗೂ ಪೌರಾಣಿಕ ಮಹತ್ವವಿದೆ. ಜ್ಞಾನ ವ್ಯಕ್ತಿಯ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಪ್ರತಿಯೊಬ್ಬರೂ ಜ್ಞಾನಾರ್ಜನೆಗೆ ಮೊದಲ ಆದ್ಯತೆ ನೀಡಬೇಕು’ ಎಂದರು.

ಪ್ರಾಧಿಕಾರದ ಉಪ ಪ್ರಧಾನ ಕಾನೂನು ನೆರವು ಅಭಿರಕ್ಷಕ ಎಸ್.ಸತೀಶ್, ಪ್ರತಿಯೊಬ್ಬರು ಸಂವಿಧಾನವನ್ನು ಗೌರವಿಸಬೇಕು. ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು ಎಂದು ಹೇಳಿದರು.

ರಾಷ್ಟ್ರಿಯ ಮಾನವ ಹಕ್ಕುಗಳ ಜಾಗೃತಿ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆಯ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಲ್.ಕಾರ್ತೀಕ್, ವಕೀಲ ಎಂ.ನಾಗರಾಜ್, ಪ್ರಾಂಶುಪಾಲ ಪ್ರೊ.ಎಸ್.ಸಣ್ಣೀರಯ್ಯ, ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಲಯದ ಸಹಾಯಕ ಸರ್ಕಾರಿ ಅಭಿಯೋಜಕ ಹಾಗೂ ಪ್ರಧಾನ ಸಿಜೆ ಆರ್.ಕೆ.ಶ್ರೀನಾಥ್, ಸಾಹಿತಿ ಆರ್.ಚೌಡರೆಡ್ಡಿ, ಲಕ್ಷ್ಮಣಬಾಬು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.