ADVERTISEMENT

ಶ್ರೀನಿವಾಸಪುರ: ಗೋಪಲ್ಲಿಯಲ್ಲಿ ಅಪಘಾತ; ಪಿಡಿಒ ಪುತ್ರ ಸಾವು

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2026, 7:57 IST
Last Updated 11 ಫೆಬ್ರುವರಿ 2026, 7:57 IST
ಪುರುಷೋತ್ತಮ್
ಪುರುಷೋತ್ತಮ್   

ಶ್ರೀನಿವಾಸಪುರ: ತಾಲ್ಲೂಕಿನ ಗೌನಿಪಲ್ಲಿ ಸಮೀಪದ ಗೋಪಲ್ಲಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ತಾಲ್ಲೂಕಿನ ಮಾಸ್ತೇನಹಳ್ಳಿ ಗ್ರಾಮ ಪಂಚಾಯಿತಿಯ ಪಿಡಿಒ ಕೆ.ಪಿ.ಶ್ರೀನಿವಾಸರೆಡ್ಡಿ ಅವರ ಪುತ್ರ ಪುರುಷೋತ್ತಮ್ (25) ಮೃತ ಸವಾರ.

ಮೃತರ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿತ್ತು. ಮಂಗಳವಾರ ಮಧ್ಯಾಹ್ನ ಸ್ವಗ್ರಾಮವಾದ ಕೆ.ಪಾತೂರು ಗ್ರಾಮದಲ್ಲಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಿತು.

ADVERTISEMENT

ಗೌನಿಪಲ್ಲಿ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.