ಶ್ರೀನಿವಾಸಪುರ: ತಾಲ್ಲೂಕಿನ ರಾಯಲ್ಪಾಡು ಹೋಬಳಿ ಗುಂಟಪಲ್ಲಿ ಅರಣ್ಯ ಪ್ರದೇಶದಲ್ಲಿ ಈಚೆಗೆ ನೀಲಗಿರಿ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿದ್ದ ಆರೋಪ ಸಂಬಂಧ ರೋಣೂರು ಗ್ರಾಮದ ಶ್ರೀನಿವಾಸ ಎಂಬುವವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಮರದ ದಿಮ್ಮಿ ತುಂಬಿದ್ದ ಲಾರಿಯನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸರ್ವೆ ನಂಬರ್ 17 ರಲ್ಲಿ 8.778 ಟನ್ ನೀಲಗಿರಿ ಮರಗಳನ್ನು ಅಕ್ರಮವಾಗಿ ಕಡಿದಿದ್ದಾರೆ ಎಂದು ಶ್ರೀನಿವಾಸಪುರ ವಲಯ ಅರಣ್ಯಾಧಿಕಾರಿ ರವಿಕೀರ್ತಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.
ಅರಣ್ಯ ಪ್ರದೇಶದಲ್ಲಿ ಗಿಡಗಂಟಿ ತೆರವುಗೊಳಿಸುವ ಟೆಂಡರ್ ಪಡೆದಿದ್ದ ವ್ಯಕ್ತಿ, ನೀಲಗಿರಿ ಮರಗಳನ್ನು ಕಡಿದು ಜೆಸಿಬಿ ಮೂಲಕ ಲಾರಿಗೆ ತುಂಬಿ ಸಾಗಿಸುತ್ತಿರುವುದಾಗಿ ಸ್ಥಳೀಯರು ದೂರಿದ್ದರು. ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದರು. ಒತ್ತಾಯಕ್ಕೆ ಮಣಿದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಿಸಿ, ಕೃತ್ಯಕ್ಕೆ ಬಳಸಲಾಗಿದ್ದ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.