
ಪ್ರಜಾವಾಣಿ ವಾರ್ತೆ
ಶ್ರೀನಿವಾಸಪುರ: ತಾಲ್ಲೂಕಿನ ಕೂಸ್ಸಂದ್ರ ಕ್ರಾಸ್‌ನಲ್ಲಿ ಮಂಗಳವಾರ ರಾತ್ರಿ ಚಿಂತಾಮಣಿ ಡಿಪೊದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವಿನ ಅಪಘಾತದಲ್ಲಿ ಸವಾರರಿಬ್ಬರು ಮೃತಪಟ್ಟಿದ್ದಾರೆ.
ನಾಗರಾಜ್ (26), ಚಂದ್ರಶೇಖರ್ (24) ಮೃತ ಸವಾರರು. 26 ವರ್ಷದ ಶ್ರೀನಿವಾಸ್ ಎಂಬುವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ದ್ವಿಚಕ್ರ ವಾಹನ ಸವಾರರು ಗುಲ್ಲು ಕುಂಟೆಯಿಂದ ಗಂಗನಗಾರಿಪಲ್ಲಿಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಹಿಬಂದಿಯಿಂದ ಡಿಕ್ಕಿಯಾಗಿದೆ ಎಂಬುದು ಗೊತ್ತಾಗಿದೆ. ಸ್ಥಳಕ್ಕೆ ಗೋನಿಪಲ್ಲಿ ಪೊಲೀಸ್ ಠಾಣೆಯ ಸರ್ಕಲ್ ಇನ್‌ಸ್ಪೆಕ್ಟರ್ ಶಿವಕುಮಾರ್, ಎಸ್‌ಐ ಶ್ರೀನಿವಾಸಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.