ADVERTISEMENT

ಎಸ್ಎಸ್ಎಲ್‌ಸಿ ಮಕ್ಕಳಿಗೆ ಪರೀಕ್ಷಾ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2026, 6:29 IST
Last Updated 14 ಫೆಬ್ರುವರಿ 2026, 6:29 IST
ಮುಳಬಾಗಿಲು ನಗರದ ಅಮರಜ್ಯೋತಿ ವಿದ್ಯಾಸಂಸ್ಥೆಗಳಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಹಾಗೂ ಫಲಿತಾಂಶಗಳ ಕುರಿತು ಕಾರ್ಯಾಗಾರ ನಡೆಯಿತು
ಮುಳಬಾಗಿಲು ನಗರದ ಅಮರಜ್ಯೋತಿ ವಿದ್ಯಾಸಂಸ್ಥೆಗಳಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಹಾಗೂ ಫಲಿತಾಂಶಗಳ ಕುರಿತು ಕಾರ್ಯಾಗಾರ ನಡೆಯಿತು   

ಮುಳಬಾಗಿಲು: ನಗರದ ಅಮರಜ್ಯೋತಿ ವಿದ್ಯಾಸಂಸ್ಥೆಯಲ್ಲಿ ಗುರುವಾರ ತಾಲ್ಲೂಕಿನ 10ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಹಾಗೂ ಫಲಿತಾಂಶಗಳ ಕುರಿತು ಪುನಶ್ಚೇತನ ಕಾರ್ಯಾಗಾರ ನಡೆಯಿತು.

ಎಸ್ಎಸ್ಎಲ್‌ಸಿ ಪರೀಕ್ಷೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಎಲ್ಲ ಪಾಠಗಳನ್ನು ಹೇಗೆ ಓದಬೇಕು. ಓದಲು ಎಷ್ಟು ಸಮಯ ನಿಗದಿ ಮಾಡಬೇಕು. ರೂಪುರೇಷೆಗಳೇನು. ಓದಿದ ವಿಷಯಗಳನ್ನು ಹೇಗೆ ನೆನಪಿನಲ್ಲಿಟ್ಟುಕೊಳ್ಳಬೇಕು. ಕಷ್ಟದ ವಿಷಯಗಳಿಗೆ ಯಾವ ರೀತಿ ಸಮಯ ನಿಗದಿ ಮಾಡಬೇಕು ಎಂಬ ಬಗ್ಗೆ ಶಿಕ್ಷಕರು ಮಾರ್ಗದರ್ಶನ ಮಾಡಬೇಕು ಎಂಬ ಬಗ್ಗೆ ಮಾರ್ಗದರ್ಶನ ನೀಡಲಾಯಿತು. 

ಸಂಪನ್ಮೂಲ ವ್ಯಕ್ತಿ ಎಂ. ಎಸ್. ಶ್ರೀನಿವಾಸರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳು ಆಸಕ್ತಿಯಿಂದ ವಿದ್ಯಾಭ್ಯಾಸ ಮಾಡಿದಲ್ಲಿ, ಓದಿದ ವಿಷಯಗಳು ನೆನಪಿನಲ್ಲಿ ಉಳಿಯುತ್ತವೆ. ಯಾವುದೇ ಕಾರಣಕ್ಕೆ ಪರೀಕ್ಷೆ ಒತ್ತಡದಲ್ಲಿ ಓದಬಾರದು ಎಂದು ಹೇಳಿದರು. 

ADVERTISEMENT

ಅಮರಜ್ಯೋತಿ ವಿದ್ಯಾ ಸಂಸ್ಥೆಗಳ ಕಾರ್ಯದರ್ಶಿ ಯಲವಹಳ್ಳಿ ಅಶೋಕ್ ಕುಮಾರ್ ಮಾತನಾಡಿದರು. 

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ರಾಮಚಂದ್ರಪ್ಪ, ಕ್ಷೇತ್ರ ಸಮನ್ವಯ ಅಧಿಕಾರಿ ಪಿ.ಸೋಮೇಶ್, ಚಿತ್ರನಟಿ ಸೌಂದರ್ಯ ಅವರ ಗಂಡ ರಘು, ಮಂಜುನಾಥ್, ಎಂ.ಎಸ್. ಶ್ರೀನಿವಾಸರೆಡ್ಡಿ, ವೆಂಕಟಗಿರಿಯಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.