ADVERTISEMENT

ಮಾರ್ಚ್‌ 25ರಿಂದ ಎಸ್ಸೆಸ್ಸೆಲ್ಸಿ ಕಿರುಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2021, 14:49 IST
Last Updated 18 ಮಾರ್ಚ್ 2021, 14:49 IST

‌‌ಕೋಲಾರ: ಸಾರ್ವಜನಿಕ ಶಿಕ್ಷಣ ಇಲಾಖೆಯು 2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮೊದಲ ಕಿರುಪರೀಕ್ಷೆ ನಡೆಸಲು ವೇಳಾಪಟ್ಟಿ ಪ್ರಕಟಿಸಿದ್ದು, ಮಾರ್ಚ್‌ 25ರಿಂದ ಪರೀಕ್ಷೆ ಆರಂಭವಾಗುತ್ತದೆ ಎಂದು ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾರ್ಚ್‌ 25ರಂದು ಬೆಳಿಗ್ಗೆ 10.30ರಿಂದ 12 ಗಂಟೆವರೆಗೆ ಪ್ರಥಮ ಭಾಷೆ, ಮಧ್ಯಾಹ್ನ 2 ಗಂಟೆಯಿಂದ 3.30ರವರೆಗೆ ಗಣಿತ ವಿಷಯದ ಪರೀಕ್ಷೆ ನಡೆಯಲಿದೆ. ಮಾರ್ಚ್‌ 26ರಂದು ಬೆಳಿಗ್ಗೆ 10.30ರಿಂದ 12 ಗಂಟೆವರೆಗೆ ತೃತೀಯ ಭಾಷೆ, ಮಧ್ಯಾಹ್ನ 2 ಗಂಟೆಯಿಂದ 3.30ರವರೆಗೆ ವಿಜ್ಞಾನ ವಿಷಯದ ಪರೀಕ್ಷೆ ನಡೆಯಲಿದೆ ಎಂದು ಹೇಳಿದ್ದಾರೆ.

ಮಾರ್ಚ್‌ 27ರಂದು ಬೆಳಿಗ್ಗೆ 10.30ರಿಂದ 12ರವರೆಗೆ ದ್ವಿತೀಯ ಭಾಷೆ, ಮಧ್ಯಾಹ್ನ 2 ಗಂಟೆಯಿಂದ 3.30ರವರೆಗೆ ಸಮಾಜ ವಿಜ್ಞಾನ ವಿಷಯದ ಪರೀಕ್ಷೆ ನಡೆಯಲಿದೆ. ಈ ವೇಳಾಪಟ್ಟಿಯಂತೆ ಶಾಲೆಗಳಲ್ಲಿ ಪರೀಕ್ಷೆ ನಡೆಸಿ ಮಾರ್ಚ್‌ 29ರೊಳಗೆ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಳಿಸಿ ಶಾಲಾವಾರು ಫಲಿತಾಂಶದ ವಿಶ್ಲೇಷಣಾ ವರದಿಯನ್ನು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ತಲುಪಿಸಬೇಕು ಎಂದು ಸೂಚಿಸಿದ್ದಾರೆ.

ADVERTISEMENT

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗಳಿಗೆ ಶಾಲೆಗಳಿಂದ ಬಂದ ಫಲಿತಾಂಶ ವಿಶ್ಲೇಷಣಾ ವರದಿಯನ್ನು ಕ್ರೋಢೀಕರಿಸಿ ಮಾರ್ಚ್‌ 31ರೊಳಗೆ ಡಿಡಿಪಿಐ ಕಚೇರಿಗೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.