ಮುಳಬಾಗಿಲು: ಬೈಕ್‌ನಲ್ಲಿ ಬಂದ ಅಪರಿಚಿತನೊಬ್ಬ ತೋಟದಿಂದ ಮನೆಗೆ ಹೋಗುತ್ತಿದ್ದ ಮಹಿಳೆಯ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ತಾಲ್ಲೂಕಿನಉತ್ತನೂರು ಗ್ರಾಮದಲ್ಲಿ ಗುರುವಾರ ನಡೆದಿದೆ.
ಗ್ರಾಮದ ಶಾರದಮ್ಮ ಸರ ಕಳೆದುಕೊಂಡವರು. ₹ 2.50 ಲಕ್ಷ ಬೆಲೆಬಾಳುವ 60 ಗ್ರಾಂ ತೂಕದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ.
ಮುಳಬಾಗಿಲು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗೆ ಬಲೆ ಬೀಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.