ADVERTISEMENT

ದೊಡ್ಡಕಲ್ಲಹಳ್ಳಿ: ಗೃಹಿಣಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2020, 2:13 IST
Last Updated 26 ಸೆಪ್ಟೆಂಬರ್ 2020, 2:13 IST

ಮಾಲೂರು: ತಾಲ್ಲೂಕಿನ ದೊಡ್ಡ ಕಲ್ಲಹಳ್ಳಿ ಗ್ರಾಮದಲ್ಲಿ ಶುಕ್ರವಾರ ಗೃಹಿಣಿ ಮೋಹನಾ (23) ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅನೇಕಲ್ ನಿವಾಸಿಯಾದ ಮೋಹನಾ ದೊಡ್ಡಕಲ್ಲಹಳ್ಳಿ ಗ್ರಾಮದ ಮಹೇಶ್ ಚಂದ್ರ ಅವರನ್ನು 11 ತಿಂಗಳ ಹಿಂದೆ ಮದುವೆಯಾಗಿದ್ದರು.

‘ಮಹೇಶ್ ಚಂದ್ರ ಮನೆಯವರು ಹಣ ತರುವಂತೆ ಪುತ್ರಿಯನ್ನು ಪೀಡಿಸುತ್ತಿದ್ದರು. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ’ ಎಂದು ಮೋಹನಾ ಪೋಷಕರು ದೂರು ನೀಡಿದ್ದಾರೆ.

ADVERTISEMENT

ಮಹೇಶ್ ಚಂದ್ರ ಹಾಗೂ ಅವರ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.ಮಾಸ್ತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.