ಸಾವು (ಪ್ರಾತಿನಿಧಿಕ ಚಿತ್ರ)
ಕೋಲಾರ: ತಾಲ್ಲೂಕಿನ ಎಂ.ಮಲ್ಲಂಡಹಳ್ಳಿಯಲ್ಲಿ ಟ್ರಾಕ್ಟರ್‌ನಲ್ಲಿ ಉಳುಮೆ ಮಾಡಲು ಹೋಗಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಎಂ.ಮಲ್ಲಂಡಳ್ಳಿ ಗ್ರಾಮದ ಶ್ರೀಕಾಂತ್ (35) ಮೃತ ಯುವಕ. ಭಾನುವಾರ ಉಳುಮೆ ಮಾಡಲು ತೆರಳಿದ್ದು, ಸೋಮವಾರ ಮುಂಜಾನೆ ಶವವಾಗಿ ಪತ್ತೆಯಾಗಿದ್ದಾರೆ.
ಟ್ರಾಕ್ಟರ್ ಕೃಷಿ ಹೊಂಡಕ್ಕೆ ಬಿದ್ದಿದ್ದು, ಶವ ಹೊರಗೆ ಪತ್ತೆಯಾಗಿದೆ. ಈಚೆಗೆ ಕುಟುಂಬದಲ್ಲಿ ಜಮೀನು ವಿವಾದ ಇರುವ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವೇಮಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.