ADVERTISEMENT

ಕೊರೊನಾ ತಡೆಗೆ ಮುನ್ನೆಚ್ಚರಿಕೆ ವಹಿಸಿ

​ಪ್ರಜಾವಾಣಿ ವಾರ್ತೆ
Published 17 ಜುಲೈ 2020, 12:56 IST
Last Updated 17 ಜುಲೈ 2020, 12:56 IST
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅ.ಮು.ಲಕ್ಷ್ಮೀನಾರಾಯಣ ಕೋಲಾರದಲ್ಲಿ ಶುಕ್ರವಾರ ಡಿಡಿಪಿಐ ಕಚೇರಿಗೆ ಸ್ವಯಂಚಾಲಿತ ಸ್ಯಾನಿಟೈಸರ್ ಉಪಕರಣ ಕೊಡುಗೆಯಾಗಿ ನೀಡಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅ.ಮು.ಲಕ್ಷ್ಮೀನಾರಾಯಣ ಕೋಲಾರದಲ್ಲಿ ಶುಕ್ರವಾರ ಡಿಡಿಪಿಐ ಕಚೇರಿಗೆ ಸ್ವಯಂಚಾಲಿತ ಸ್ಯಾನಿಟೈಸರ್ ಉಪಕರಣ ಕೊಡುಗೆಯಾಗಿ ನೀಡಿದರು.   

ಕೋಲಾರ: ‘ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಗೆ ಶಿಕ್ಷಕರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಇಲ್ಲಿ ಕೊರೊನಾ ಸೋಂಕಿನ ತಡೆಗೆ ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅ.ಮು.ಲಕ್ಷ್ಮೀನಾರಾಯಣ ತಿಳಿಸಿದರು.

ನಗರದಲ್ಲಿ ಶುಕ್ರವಾರ ಡಿಡಿಪಿಐ ಕಚೇರಿಗೆ ಸ್ವಯಂಚಾಲಿತ ಸ್ಯಾನಿಟೈಸರ್ ಉಪಕರಣ ವಿತರಿಸಿ ಮಾತನಾಡಿ, ‘ಕೊರೊನಾ ಸೋಂಕಿನಿಂದ ಇಡೀ ಜಗತ್ತು ತಲ್ಲಣಗೊಂಡಿದೆ. ಸರ್ಕಾರಿ ಕಚೇರಿಗಳಿಗೆ ಬರುವ ಪ್ರತಿ ವ್ಯಕ್ತಿಯು ಮಾಸ್ಕ್ ಧರಿಸಬೇಕು ಮತ್ತು ಕೈಗಳನ್ನು ಸ್ಯಾನಿಟೈಸರ್‌ನಿಂದ ಸ್ವಚ್ಛಗೊಳಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಕೊರೊನಾ ಸೋಂಕಿನ ತಡೆಗೆ ವೈದ್ಯಕೀಯ ಸಿಬ್ಬಂದಿ ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಪೊಲೀಸ್‌ ಹಾಗೂ ಶಿಕ್ಷಣ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಜೀವದ ಹಂಗು ಕೆಲಸ ಮಾಡುತ್ತಿದ್ದಾರೆ’ ಎಂದು ಡಿಡಿಪಿಐ ಕೆ.ರತ್ನಯ್ಯ ಸ್ಮರಿಸಿದರು.

ADVERTISEMENT

ಶಿಕ್ಷಣಾಧಿಕಾರಿಗಳಾದ ಸಿ.ಆರ್.ಅಶೋಕ್, ದೈಹಿಕ ಶಿಕ್ಷಣ ಶಿಕ್ಷಕ ಅಧೀಕ್ಷಕ ಮಂಜುನಾಥ್, ಶಿಕ್ಷಣ ಸಂಯೋಜಕ ಆರ್.ಶ್ರೀನಿವಾಸನ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.